ಮಂಡ್ಯದ 1,22,071ನೇ ರೋಗಿ ಜುಲೈ 28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆ.3ರಂದು ಅವರಿಗೆ ಕೋವಿಡ್ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ 1,09,653ನೇ ರೋಗಿ ಆ.3ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ಅವರು ಕೂಡ ಮೃತಪಟ್ಟಿದ್ದಾರೆ. ಕೋವಿಡ್ ಕಾರ್ಯಸೂಚಿಯಂತೆ ಸೋಮವಾರ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.