ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಂಡ್ಯ | ಇಬ್ಬರ ಸಾವು, 66 ಮಂದಿಗೆ ಕೋವಿಡ್‌ ದೃಢ

Last Updated 10 ಆಗಸ್ಟ್ 2020, 16:26 IST
ಅಕ್ಷರ ಗಾತ್ರ

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಸೋಂಕಿತರು ಸೋಮವಾರ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟ ಒಟ್ಟು ಸೋಂಕಿತರ ಸಂಖ್ಯೆ 24ಕ್ಕೆ ಏರಿಕೆಯಾಗಿದೆ.

ಮಂಡ್ಯದ 1,22,071ನೇ ರೋಗಿ ಜುಲೈ 28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆ.3ರಂದು ಅವರಿಗೆ ಕೋವಿಡ್‌ ದೃಢಪಟ್ಟಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆಯ 1,09,653ನೇ ರೋಗಿ ಆ.3ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು ಅವರು ಕೂಡ ಮೃತಪಟ್ಟಿದ್ದಾರೆ. ಕೋವಿಡ್‌ ಕಾರ್ಯಸೂಚಿಯಂತೆ ಸೋಮವಾರ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.

66 ಮಂದಿಗೆ ಸೋಂಕು: ಹೊಸದಾಗಿ ಸೋಮವಾರ 66 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2,624ಕ್ಕೆ ಏರಿಕೆಯಾಗಿದೆ. ಇಲ್ಲಿಯವರೆಗೂ ಕೋವಿಡ್‌ನಿಂದ ಗುಣಮುಖರಾದ 1,349 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. 1,261 ಪ್ರಕರಣಗಳು ಸಕ್ರಿಯವಾಗಿವೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು: 2,624

ಸಕ್ರಿಯ ಪ್ರಕರಣ: 1,261

ಏರಿಕೆ: 66

ಗುಣಮುಖ: 1,349

ಏರಿಕೆ: 00

ಸಾವು: 24

ಏರಿಕೆ: 02

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT