ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಲ್ಮನೆ ಕಾಮೇಗೌಡರಿಗೆ ಕೋವಿಡ್-19 ದೃಢ

Last Updated 22 ಜುಲೈ 2020, 8:02 IST
ಅಕ್ಷರ ಗಾತ್ರ

ಮಂಡ್ಯ: ಮಳವಳ್ಳಿ ತಾಲ್ಲೂಕು, ದಾಸನದೊಡ್ಡಿ ಗ್ರಾಮದ ಕಲ್ಮನೆ ಕಾಮೇಗೌಡರಿಗೆ ಕೋವಿಡ್-19 ದೃಢಪಟ್ಟಿದೆ.

ಬಲಗಾಲಿನಲ್ಲಿ ಆಗಿದ್ದ ಗಾಯದ ಸೋಂಕಿನಿಂದ ಅವರು ಬಳಲುತ್ತಿದ್ದರು. ಮಳವಳ್ಳಿ ತಾಲ್ಲೂಕು ಆಸ್ಪತ್ರೆ, ಜಿಲ್ಲಾಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು. ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದ ಅವರು ನಿತ್ಯ ಆಸ್ಪತ್ರೆಗೆ ಹೋಗಿ, ಚಿಕಿತ್ಸೆ ಪಡೆದು ಮನೆಗೆ ಮರಳುತ್ತಿದ್ದರು.

85 ವರ್ಷ ವಯಸ್ಸಿನ ಕಾಮೇಗೌಡರು ಉಸಿರಾಟದ ಸಮಸ್ಯೆಯಿಂದಲೂ ಬಳಲುತ್ತಿದ್ದಾರೆ.

'ಚಿಕ್ಕವನಾಗಿದ್ದಾಗಿನಿಂದಲೂ ನನ್ನ ಪ್ರಪಂಚ ಬೆಟ್ಟ, ಕೆರೆಗೆ ಸೀಮಿತವಾಗಿದೆ. ಕೆರೆ, ಗಿಡ ಬಿಟ್ಟರೇ ಬೇರೇನೂ ಗೊತ್ತಿಲ್ಲ' ಎನ್ನುತ್ತಿದ್ದ ಕಾಮೇಗೌಡರ ಸಾಧನೆಯನ್ನು ಪ್ರಧಾನಿ ನರೇಂದ್ರ ಮೋದಿ ಸಹ ಕೊಂಡಾಡಿದ್ದರು.

ಮಳವಳ್ಳಿ ಪಟ್ಟಣದಿಂದ 10 ಕಿ.ಮೀ ದೂರದಲ್ಲಿ ಲಿಂಗಾಕಾರದಲ್ಲಿರುವ ಈ ಪರ್ವತವನ್ನು ಕುಂದೂರು ಬೆಟ್ಟ ಎಂದೂ ಕರೆಯುತ್ತಾರೆ. ಬೆಟ್ಟದ ತಪ್ಪಲಲ್ಲಿ ದಾಸನದೊಡ್ಡಿ, ಪಂಡಿತಹಳ್ಳಿ, ಹೊಸದೊಡ್ಡಿ, ತಿರುಮಳ್ಳಿ, ಪಣತಹಳ್ಳಿ ಸೇರಿ ಹತ್ತೂರುಗಳಿವೆ. ಕಳೆದ 40 ವರ್ಷಗಳಿಂದ ಈ ಬೆಟ್ಟಕ್ಕೆ ಕಾವಲುಗಾರನಂತಿರುವ ದಾಸನದೊಡ್ಡಿಯ ಕಾಮೇಗೌಡ, ಬೆಟ್ಟದ ಮೇಲೆ ಕಟ್ಟೆ, ಕಾಲುವೆ, ರಸ್ತೆ ನಿರ್ಮಿಸಿದ್ದಾರೆ. ಬೆಟ್ಟದ ತಪ್ಪಲಲ್ಲಿ ಸಾವಿರಾರು ಗಿಡ ನೆಟ್ಟು ಬೆಳೆಸಿರುವ ಅವರು ಈ ಭಾಗದಲ್ಲಿ ‘ಪರಿಸರ ಸಂರಕ್ಷಕ’ ಎಂದೇ ಖ್ಯಾತಿ ಗಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT