ಮಂಡ್ಯ: ಗುರುವಾರ ಒಂದೇ ದಿನ ಹೊಸದಾಗಿ 87ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಒಟ್ಟು ರೋಗಿಗಳ ಸಂಖ್ಯೆ 1,500ಕ್ಕೆ ಹೆಚ್ಚಾಗಿದೆ.
ಮಂಡ್ಯ ತಾಲ್ಲೂಕೊಂದರಲ್ಲೇ 39 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಮದ್ದೂರು 14, ನಾಗಮಂಗಲ 11, ಶ್ರೀರಂಗಪಟ್ಟಣ 9, ಮಳವಳ್ಳಿ 8, ಕೆ.ಆರ್.ಪೇಟೆ 3 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಜಿಲ್ಲಾಸ್ಪತ್ರೆ, ಆದಿಚುಂಚನಗಿರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಹೆಚ್ಚಿನ ಸಂಖ್ಯೆಯ ಪರೀಕ್ಷೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆಯೂ ಹೆಚ್ಚಳವಾಗುತ್ತಿದೆ. ಗುರುವಾರ ಕೋವಿಡ್‌ನಿಂದ ಯಾರೂ ಮೃತಪಟ್ಟಿಲ್ಲ. ಇಲ್ಲಿಯವರೆಗೂ ಸೋಂಕಿನಿಂದ 16 ಮಂದಿ ಮೃತಪಟ್ಟಿದ್ದಾರೆ.
ಒಟ್ಟು 1,500 ರೋಗಿಗಳಲ್ಲಿ 914 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ. 576 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್‌ನಿಂದ ಗುಣಮುಖರಾದ ಒಟ್ಟು 50 ಮಂದಿಯನ್ನು ಗುರುವಾರ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.
ಮಂಡ್ಯ ತಾಲ್ಲೂಕಿನಿಂದ 16, ಮಳವಳ್ಳಿ 12, ಮದ್ದೂರು 5, ಶ್ರೀರಂಗಪಟ್ಟಣ 4, ಪಾಂಡವಪುರ 2, ಕೆ.ಆರ್‌ಪೇಟೆ ಒಬ್ಬರು, ರಾಮನಗರ ಜಿಲ್ಲೆಯ ಮೂವರು ಆಸ್ಪತ್ರೆಯಿಂದ ಬಿಡುಗಡೆಯಾದರು.
ಕೋವಿಡ್ ಅಂಕಿ–ಅಂಶ
ಜಿಲ್ಲೆಯಲ್ಲಿ ಒಟ್ಟು: 1500,ಸಕ್ರಿಯ ಪ್ರಕರಣ: 576, ಏರಿಕೆ: 87,ಗುಣಮುಖ: 914,ಏರಿಕೆ: 50,ಸಾವು: 16
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.