ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂವರ ಸಾವು: 123 ಮಂದಿಗೆ ಸೋಂಕು

2,158ಕ್ಕೆ ಏರಿಕೆಯಾದ ಒಟ್ಟು ಸಂಖ್ಯೆ, 953 ಪ್ರಕರಣಗಳು ಸಕ್ರಿಯ
Last Updated 5 ಆಗಸ್ಟ್ 2020, 15:38 IST
ಅಕ್ಷರ ಗಾತ್ರ

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮೂವರು ಬುಧವಾರ ಮೃತಪಟ್ಟಿದ್ದು ಜಿಲ್ಲೆಯಲ್ಲಿ ಕೋವಿಡ್‌–19ನಿಂದ ಮೃತಪಟ್ಟವರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಕೋವಿಡ್‌ ಪತ್ತೆಯಾಗಿ ಇತರ ರೋಗಗಳಿಂದ ಮೃತಪಟ್ಟವರ ಸಂಖ್ಯೆ ಜಿಲ್ಲೆಯಲ್ಲಿ 30ರ ಗಡಿ ತಲುಪಿದೆ. ಆದರೆ ಕೇವಲ ಕೋವಿಡ್‌ನಿಂದಲೇ 19 ಮಂದಿ ಮೃತಪಟ್ಟಿದ್ದಾರೆ.

‘ಹೃದಯಾಘಾತ, ಕಿಡ್ನಿ ಸಮಸ್ಯೆಯಿಂದ ಬಳಲುವವರಿಗೂ ಕೋವಿಡ್‌ ದೃಢಪಟ್ಟಿದೆ. ಅವರ ಸಾವನ್ನು ಕೋವಿಡ್‌ ಸಾವು ಎಂದು ಪರಿಗಣಿಸಲು ಬರುವುದಿಲ್ಲ. ಸೋಂಕು ಪತ್ತೆಯಾಗಿ ತೀವ್ರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟವರೆ ಮಾತ್ರ ಅದನ್ನು ಕೋವಿಡ್‌ ಸಾವು ಎಂದು ಪರಿಗಣಿಸಲಾತ್ತದೆ’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಎಚ್‌.ಪಿ.ಮಂಚೇಗೌಡ ಹೇಳಿದರು.

1,48,682ನೇ ರೋಗಿ ಆ.2ರಂದು ಕೋವಿಡ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ತೀವ್ರ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬುಧವಾರ ಮೃತಪಟ್ಟಿದ್ದಾರೆ. 1,49,455ನೇ ರೋಗಿ, 1,15,987ನೇ ರೋಗಿಗಳು ಕೂಡ ತೀವ್ರ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ.

123 ಮಂದಿಗೆ ಸೋಂಕು: ಬುಧವಾರ ಒಂದೇ ದಿನ ಹೊಸದಾಗಿ 123 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಜಿಲ್ಲೆಯಲ್ಲಿ ಒಟ್ಟು ರೋಗಿಗಳ ಸಂಖ್ಯೆ 2,158ಕ್ಕೆ ಏರಿಕೆಯಾಗಿದೆ.

ನಾಗಮಂಗಲ ತಾಲ್ಲೂಕಿನ 44 ಮಂದಿ, ಮಂಡ್ಯ 42, ಮದ್ದೂರು 7, ಮಳವಳ್ಳಿ 13, ಶ್ರೀರಂಗಪಟ್ಟಣ 9, ಪಾಂಡವಪುರ 4, ಕೆ.ಆರ್‌.ಪೇಟೆ ತಾಲ್ಲೂಕಿನ 4 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

ಕೋವಿಡ್‌ನಿಂದ ಗುಣಮುಖರಾದ 90 ರೋಗಿಗಳನ್ನು ಬುಧವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 30, ಮಳವಳ್ಳಿ 20, ಮದ್ದೂರು 11, ನಾಗಮಂಗಲ 10 ಮಂದಿ ಗುಣಮುಖರಾಗಿ ಮನೆಗೆ ತೆರಳಿದರು. ಇಲ್ಲಿಯವರೆಗೆ 1,185 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದು 953 ಪ್ರಕರಣಗಳು ಸಕ್ರಿಯವಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT