ಮಂಡ್ಯ: ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 40ಕ್ಕೆ ಹೆಚ್ಚಾಗಿದೆ.

ಮಂಡ್ಯ ತಾಲ್ಲೂಕಿನ 1,92,916ನೇ ರೋಗಿ ನ್ಯೂಮೊನಿಯಾ ಹಾಗೂ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ವೆಂಟಿಲೇಟರ್ ಸಹಾಯದಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಶುಕ್ರವಾರ ಕೋವಿಡ್ ಕಾರ್ಯಸೂಚಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಶುಕ್ರವಾರ ಒಂದೇ ದಿನ 99 ಮಂದಿಗೆ ಕೋವಿಡ್–19 ದೃಢಪಟ್ಟಿದ್ದು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,947ಕ್ಕೆ ಏರಿಕೆಯಾಗಿದೆ. ಮಂಡ್ಯ ತಾಲ್ಲೂಕಿನಲ್ಲಿ 41 ಮಂದಿ, ಮದ್ದೂರು 12, ಮಳವಳ್ಳಿ 25, ಪಾಂಡವಪುರ 2, ಶ್ರೀರಂಗಪಟ್ಟಣ 8, ಕೆ.ಆರ್.ಪೇಟೆ ತಾಲ್ಲೂಕಿನ 10 ಮಂದಿಯಲ್ಲಿ ಕೋವಿಡ್–19 ದೃಢಪಟ್ಟಿದೆ. ಎಲ್ಲರನ್ನೂ ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ದಾಖಲು ಮಾಡಲಾಗಿದೆ.

ಕೋವಿಡ್‌ನಿಂದ ಗುಣಮುಖರಾದ 64 ವ್ಯಕ್ತಿಗಳನ್ನು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 44, ಮದ್ದೂರು 4, ಮಳವಳ್ಳಿ 1, ಪಾಂಡವಪುರ 1, ಶ್ರೀರಂಗಪಟ್ಟಣ 11, ನಾಗಮಂಗಲದ ಮೂವರನ್ನು ಬಿಡುಗಡೆ ಮಾಡಲಾಯಿತು. ಒಟ್ಟು ರೋಗಿಗಳಲ್ಲಿ ಇಲ್ಲಿಯವರೆಗೆ 2,350 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ. 1,557 ಪ್ರಕರಣಗಳು ಸಕ್ರಿಯವಾಗಿವೆ.

ಕೋವಿಡ್ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು: 3,947

ಸಕ್ರಿಯ ಪ್ರಕರಣ: 1,557

ಏರಿಕೆ: 99

ಗುಣಮುಖ: 2,350

ಏರಿಕೆ: 64

ಸಾವು: 40

ಏರಿಕೆ: 01

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.