ಮಂಗಳವಾರ, ಜೂನ್ 15, 2021
23 °C

ಮಂಡ್ಯದಲ್ಲಿ ಕೋವಿಡ್‌ಗೆ ಇಬ್ಬರ ಸಾವು, 174 ಮಂದಿಗೆ ಸೋಂಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ರೋಗಿಗಳು ಮಂಗಳವಾರ ಮೃತಪಟ್ಟಿದ್ಧಾರೆ. ಕೋವಿಡ್‌ನಿಂದ ಜಿಲ್ಲೆಯಲ್ಲಿ ಮೃತಪಟ್ಟವರ ಸಂಖ್ಯೆ 39ಕ್ಕೆ ಏರಿಕೆಯಾಗಿದೆ.

ಮದ್ದೂರು ತಾಲ್ಲೂಕಿನ 1,44,176ನೇ ರೋಗಿ ನ್ಯುಮೋನಿಯಾ, ಉಸಿರಾಟದ ತೊಂದರೆ, ಜ್ವರಿಂದ ಬಳಲುತ್ತಿದ್ದರು. ಕೆ.ಆರ್‌.ಪೇಟೆ ತಾಲ್ಲೂಕಿನ 1,92,898ನೇ ರೋಗಿ ಕೂಡ ತೀವ್ರ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರಿಗೆ ವೆಂಟಿಲೇಟರ್‌ ಅಳವಡಿಸಲಾಗಿತ್ತು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಂಗಳವಾರ ಕೋವಿಡ್‌ ಕಾರ್ಯಸೂಚಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು.

ಜಿಲ್ಲೆಯಲ್ಲಿ ಮಂಗಳವಾರ ಒಂದೇ ದಿನ ಹೊಸದಾಗಿ 174 ಮಂದಿಯಲ್ಲಿ ಕೋವಿಡ್‌ ಪತ್ತೆಯಾಗಿದೆ. ಜಿಲ್ಲೆಯ ಒಟ್ಟು ರೋಗಿಗಳ ಸಂಖ್ಯೆ 3,554ಕ್ಕೆ ಏರಿಕೆಯಾಗಿದೆ.

ಮಂಡ್ಯ ತಾಲ್ಲೂಕಿನ 55 ಮಂದಿ, ಮದ್ದೂರಿನ 40, ಮಳವಳ್ಳಿ 12, ಪಾಂಡವಪುರ 19, ಶ್ರೀರಂಗಪಟ್ಟಣ 13, ಕೆ.ಆರ್‌.ಪೇಟೆ 10, ನಾಗಮಂಗಲ ತಾಲ್ಲೂಕಿನ 25 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲರನ್ನೂ ವಿವಿಧ ಕೋವಿಡ್‌ ಆಸ್ಪತ್ರೆಗಳಿಗೆ ದಾಖಲು ಮಾಡಲಾಗಿದೆ.

ಕೋವಿಡ್‌ನಿಂದ ಗುಣಮುಖರಾದ 130 ಮಂದಿಯನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಇಲ್ಲಿಯವರೆಗೆ ಕೋವಿಡ್‌ನಿಂದ ಗುಣಮುಖರಾದವರ ಸಂಖ್ಯೆ 2,116ಕ್ಕೆ ಏರಿಕೆಯಾಗಿದೆ. 1,398 ಪ್ರಕರಣಗಳು ಸಕ್ರಿಯವಾಗಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.