ಶನಿವಾರ, ಜೂನ್ 19, 2021
21 °C

ಶ್ರೀರಂಗಪಟ್ಟಣ: ಕೊರೊನಾ ಸೋಂಕಿತ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀರಂಗಪಟ್ಟಣ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಕೋವಿಡ್‌ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೊರೊನಾ ಸೋಂಕಿತ ವ್ಯಕ್ತಿ ಭಾನುವಾರ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ತಾಲ್ಲೂಕಿನ ಅರಕೆರೆ ಗ್ರಾಮದ ತೈಲಾನ್‌ಶೆಟ್ಟಿ ಅವರ ಪುತ್ರ ಜಯಕುಮಾರ್‌ (48) ಆಸ್ಪತ್ರೆ ಆವರಣದ ಮರಕ್ಕೆ ತಮ್ಮ ಲುಂಗಿಯಿಂದ ನೇಣು ಹಾಕಿಕೊಂಡಿದ್ದಾರೆ.

ಏ.21ರಿಂದ ಗಣಂಗೂರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಕೋವಿಡ್‌ ಕೇಂದ್ರದಲ್ಲಿದ್ದ ಅವರಿಗೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಎರಡು ದಿನಗಳ ಹಿಂದೆ ಪಟ್ಟಣದ ಕೋವಿಡ್‌ ಕೇಂದ್ರಕ್ಕೆ ಕರೆತರಲಾಗಿತ್ತು.

ಜಯಕುಮಾರ್ ಅವರ ಪತ್ನಿ ಹಾಗೂ ಇಬ್ಬರು ಮಕ್ಕಳಿಗೂ ಕೋವಿಡ್‌ ದೃಢಪಟ್ಟಿತ್ತು. ಇದರಿಂದ ಮನನೊಂದು ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಪ ವಿಭಾಗಾಧಿಕಾರಿ ಬಿ.ಸಿ.ಶಿವಾನಂದಮೂರ್ತಿ, ತಹಶೀಲ್ದಾರ್‌ ಎಂ.ವಿ.ರೂಪಾ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದರು.

ಪಟ್ಟಣದ ಸಮೀಪ, ಕಾವೇರಿ ನದಿ ದಡದಲ್ಲಿರುವ ತುಳಸಿಕಟ್ಟೆ ಸ್ಮಶಾನದಲ್ಲಿ ತಾಲ್ಲೂಕು ಆಡಳಿತದಿಂದಲೇ ಅಂತ್ಯಕ್ರಿಯೆ ನಡೆಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು