ಭಾನುವಾರ, ಜೂನ್ 13, 2021
23 °C
ಇಲ್ಲಿಯವರೆಗೂ 1,693 ಮಂದಿ ಗುಣಮುಖ, 1,291 ಪ್ರಕರಣಗಳು ಸಕ್ರಿಯ

ಮಂಡ್ಯ | ಇಬ್ಬರ ಸಾವು; 3 ಸಾವಿರ ದಾಟಿದ ಸೋಂಕಿತರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಸಾವನ್ನಪ್ಪಿದವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.

ನಾಗಮಂಗಲ ತಾಲ್ಲೂಕಿನ 1,64,454ನೇ ರೋಗಿ ಜ್ವರ, ಲಿವರ್‌ ತೊಂದರೆಯಿಂದ ಬಳಲುತ್ತಿದ್ದರು. ಅವರಿಗೆ ಕೋವಿಡ್‌–19 ದೃಢಪಟ್ಟಿತ್ತು. ವೆಂಟಿಲೇಟರ್‌ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಸ್ಪಂದಿಸದ ಅವರು ಗುರುವಾರ ಮೃತಪಟ್ಟಿದ್ದಾರೆ. ನಾಗಮಂಗಲ ತಾಲ್ಲೂಕಿನ ಮತ್ತೊಬ್ಬರು ಕೋವಿಡ್‌ನಿಂದ ಮೃತಪಟ್ಟಿದ್ದಾರೆ.

1,79,167ನೇ ರೋಗಿಗೆ ವೆಂಟಿಲೇಟರ್‌ ಮೂಲಕ ಚಿಕಿತ್ಸೆ ನೀಡಲಾಗುತ್ತಿತ್ತು. ಚೇತರಿಕೆ ಕಾಣದ ಅವರು ಕೊನೆಯುಸಿರೆಳೆದರು. ಇಬ್ಬರನ್ನೂ ಕೋವಿಡ್‌ ಕಾರ್ಯಸೂಚಿಯನ್ವಯ ಅಂತ್ಯಕ್ರಿಯೆ ನೆರವೇರಿಸಲಾಯಿತು.

135 ಮಂದಿಗೆ ಸೋಂಕು: ಗುರುವಾರ ಹೊಸದಾಗಿ 135 ಮಂದಿಯಲ್ಲಿ ಕೋವಿಡ್‌–19 ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 3,016ಕ್ಕೆ ಹೆಚ್ಚಳವಾಗಿದೆ.

ಮಂಡ್ಯ ತಾಲ್ಲೂಕಿನ 42 ಮಂದಿ, ಶ್ರೀರಂಗಪಟ್ಟಣ 30, ಪಾಂಡವಪುರ 21, ಮಳವಳ್ಳಿ 11, ಮದ್ದೂರು 10, ಕೆ.ಆರ್‌.ಪೇಟೆ 10, ನಾಗಮಂಗಲ ತಾಲ್ಲೂಕಿನ ಐವರಲ್ಲಿ ಸೋಂಕು ಪತ್ತೆಯಾಗಿದೆ. ಎಲ್ಲರನ್ನೂ ಆಯಾ ತಾಲ್ಲೂಕು ವ್ಯಾಪ್ತಿಯ ಕೋವಿಡ್ ಆಸ್ಪತ್ರೆ, ಕೋವಿಡ್‌ ಕೇರ್‌ ಕೇಂದ್ರಗಳಿಗೆ ದಾಖಲು ಮಾಡಲಾಗಿದೆ. ಮೈಸೂರು ಜಿಲ್ಲೆಯ ಒಬ್ಬರು ಮಂಡ್ಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಕೋವಿಡ್‌ನಿಂದ ಗುಣಮುಖರಾದ 170 ಮಂದಿಯನ್ನು ಗುರುವಾರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ಮಂಡ್ಯ ತಾಲ್ಲೂಕಿನ 63, ನಾಗಮಂಗಲ 30, ಮದ್ದೂರು 27, ಪಾಂಡವಪುರ 20, ಮಳವಳ್ಳಿ 12, ಶ್ರೀರಂಗಪಟ್ಟಣ 10, ಕೆ.ಆರ್‌.ಪೇಟೆ ತಾಲ್ಲೂಕಿನ 8 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು. ಇಲ್ಲಿಯವರೆಗೂ 1693 ಮಂದಿ ಗುಣಮುಖರಾಗಿದ್ದು 1291 ಪ್ರಕರಣಗಳು ಸಕ್ರಿಯವಾಗಿವೆ.

ಕೋವಿಡ್‌ ಅಂಕಿ–ಅಂಶ

ಜಿಲ್ಲೆಯಲ್ಲಿ ಒಟ್ಟು: 3,016

ಸಕ್ರಿಯ ಪ್ರಕರಣ: 1,291

ಏರಿಕೆ: 135

ಗುಣಮುಖ: 1,693

ಏರಿಕೆ: 170

ಸಾವು: 31

ಏರಿಕೆ: 02

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು