ಶುಕ್ರವಾರ, ಮೇ 7, 2021
23 °C

ಮಂಡ್ಯ: 1 ಸಾವು, 105 ಮಂದಿಗೆ ಕೋವಿಡ್‌ ದೃಢ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಂಡ್ಯ: ಕೋವಿಡ್‌–19ನಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಶುಕ್ರವಾರ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ. ಹೊಸದಾಗಿ 105 ಮಂದಿಯಲ್ಲಿ ಕೋವಿಡ್‌ ದೃಢಪಟ್ಟಿವೆ.

ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 20,618ಕ್ಕೆ ಏರಿಕೆಯಾಗಿದೆ. ಮಂಡ್ಯ ತಾಲ್ಲೂಕಿನ 35, ಪಾಂಡವಪುರ 15, ಶ್ರೀರಂಗಪಟ್ಟಣ 14, ಮದ್ದೂರು, ಮಳವಳ್ಳಿ ತಲಾ 10, ನಾಗಮಂಗಲ 9, ಕೆ.ಆರ್‌.ಪೇಟೆ ತಾಲ್ಲೂಕಿನ 8 ಮಂದಿಯಲ್ಲಿ ಶುಕ್ರವಾರ ಸೋಂಕು ಪತ್ತೆಯಾಗಿದೆ. ಕೋವಿಡ್‌ನಿಂದ 50 ಮಂದಿ ಗುಣಮುಖರಾಗಿದ್ದು ಒಟ್ಟು ಗುಣಮುಖರಾದವರ ಸಂಖ್ಯೆ 19,961ಕ್ಕೆ ಹೆಚ್ಚಾಗಿದೆ.

ಇಲ್ಲಿಯವರೆಗೂ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 163ಕ್ಕೆ ಹೆಚ್ಚಾಗಿದೆ. 493 ಸಕ್ರಿಯ ಪ್ರಕರಣಗಳಿವೆ. 312 ಮಂದಿ ಮನೆಯಲ್ಲಿ ಪ್ರತ್ಯೇಕವಾಗಿ ಚಿಕಿತ್ಸೆ ಪಡೆಯುತ್ತಿದ್ಧಾರೆ. 86 ಮಂದಿ ಕೋವಿಡ್‌ ಕೇರ್‌ ಕೇಂದ್ರಗಳಲ್ಲಿ, 94 ಮಂದಿ ಸರ್ಕಾರಿ ಆಸ್ಪತ್ರೆಗಳಲ್ಲಿ, ಒಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ಧಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು