ಶುಕ್ರವಾರ, ಫೆಬ್ರವರಿ 21, 2020
26 °C

ಆಶ್ಲೀಲ ವಿಡಿಯೊ ತೋರಿಸುತ್ತಿದ್ದ ಶಿಕ್ಷಕ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಿಕ್ಕೇರಿ: ವಿದ್ಯಾರ್ಥಿನಿಯರಿಗೆ ಅಶ್ಲೀಲ ವಿಡಿಯೊ ತೋರಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ಸರ್ಕಾರಿ ಶಾಲೆಯ ಶಿಕ್ಷಕನೊಬ್ಬನನ್ನು ಗುರುವಾರ ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಸಮೀಪದ ವಡ್ಡರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕ ಭಾಸ್ಕರ್ ಬಿಂದುರಾವ್ ನಾಡಿಗಾರ್ (54) ಬಂಧಿತ ಶಿಕ್ಷಕ.

4ನೇ ತರಗತಿಯ ಹೆಣ್ಣು ಮಕ್ಕಳ ಮೈಮುಟ್ಟುವುದು, ಮೊಬೈಲ್‌ ಫೋನಿನಲ್ಲಿ ಅಶ್ಲೀಲ ಚಿತ್ರ ತೋರಿಸುವುದು, ಅಸಭ್ಯವಾಗಿ ಮಾತನಾಡುತ್ತಿದ್ದ. ಈ ವಿಚಾರವನ್ನು ಪೋಷಕರಿಗೆ ತಿಳಿಸದಂತೆ ಮಕ್ಕಳಿಗೆ ಬೆದರಿಕೆ ಹಾಕಿದ್ದ.

ವಿದ್ಯಾರ್ಥಿನಿಯರ ಮಾಹಿತಿ ಮೇರೆಗೆ ಗ್ರಾಮಸ್ಥರು ಶಿಕ್ಷಕನ ಚಲನವಲನ ಗಮನಿಸಿದ್ದಾರೆ. ನಂತರ ಆತನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಿಕ್ಕೇರಿ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು