ಮಂಡ್ಯ: ಶೀಲ ಶಂಕಿಸಿ ಪತ್ನಿ ಕೊಲೆ ಮಾಡಿದ್ದ ರಾಮಚಂದ್ರ ಎಂಬಾತನಿಗೆ ಇಲ್ಲಿನ 2ನೇ ಅಧಿಕ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹52 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.

ತಾಲ್ಲೂಕಿನ ಯಲಿಯೂರು ವೃತ್ತದ ಬಳಿ ವಾಸವಾಗಿದ್ದ ರಾಮಚಂದ್ರನು ತನ್ನ ಪತ್ನಿ ಮನುಜಾಳನ್ನು 2023ರ ಮೇ 4ರಂದು ಆಕೆಯೊಂದಿಗೆ ಜಗಳ ತೆಗೆದು ಚಾಕುವಿನಿಂದ ಇರಿದು, ಕತ್ತು ಕೊಯ್ದು ಹತ್ಯೆ ಮಾಡಿದ್ದ.

ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಇನ್ಸ್ಪೆಕ್ಟರ್ ಎಚ್.ಆರ್.ಸಿದ್ದಪ್ಪ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಧೀಶರಾದ ಸಯ್ಯುದುನಿಶಾ ಅವರು ಆದೇಶ ನೀಡಿದ್ದಾರೆ. ಪ್ರಾಸಿಕ್ಯೂಷನ್ ಪರವಾಗಿ ಎನ್.ಬಿ.ವಿಜಯಲಕ್ಷ್ಮಿ ಅವರು ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.