ಭಾನುವಾರ, ಆಗಸ್ಟ್ 14, 2022
26 °C

ಪ್ರಿಯಕರನ ಜೊತೆಗೂಡಿ ಪತಿಯ ಕೊಲೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ತಾಲ್ಲೂಕಿನ ಹನಕೆರೆ ಗ್ರಾಮದಲ್ಲಿ ಈಚೆಗೆ ನಡೆದ ವ್ಯಕ್ತಿಯ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು ಮಹಿಳೆಯೊಬ್ಬರು ತನ್ನ ಪ್ರಿಯಕರ ಜೊತೆಗೂಡಿ ಪತಿಯನ್ನು ಕೊಲೆ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ.

ನ.17ರಂದು ಹನೆಕರೆ ಗ್ರಾಮದ ಪುನೀತ್‌ (35) ಕೊಲೆಯಾಗಿದ್ದರು. ಪ್ರಕರಣದ ಪ್ರಮುಖ ಆರೋಪಿ, ಪುನೀತ್‌ ಪತ್ನಿ ಶಿಲ್ಪಾ (32), ಈಕೆಯ ಪ್ರಿಯಕರ, ಮೈಸೂರು ಜಿಲ್ಲೆ, ಕೆ.ಆರ್‌.ನಗರ ತಾಲ್ಲೂಕು ಕೆಸ್ತೂರು ಕೊಪ್ಪಲು ಗ್ರಾಮದ ಮಧುಸೂದನ್‌ (27) ಬಂಧಿತರಾಗಿದ್ದಾರೆ.

ಪುನೀತ್‌–ಶಿಲ್ಪಾ 15 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಈ ದಂಪತಿಗೆ 13 ವರ್ಷದ ಮಗನಿದ್ದಾನೆ. ಬ್ಯೂಟಿ ಪಾರ್ಲರ್‌ ನಡೆಸುತ್ತಿದ್ದ ಶಿಲ್ಪಾ, ಫೈನಾನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಮಧುಸೂದನ್‌ ಜೊತೆ ಅನೈತಿಕ ಸಂಬಂಧ ಇಟ್ಟುಕೊಂಡಿದ್ದಳು. ಈ ವಿಚಾರ ಪತಿಗೆ ಗೊತ್ತಾಗಿ ಗಲಾಟೆ ಮಾಡಿದ್ದರು. ಆರೋಪಿಗಳಿಬ್ಬರೂ ಸೇರಿ ನ.17ರಂದು ರಾತ್ರಿ 10 ಗಂಟೆ ಸಮಯದಲ್ಲಿ ಕೊಲೆ ಮಾಡಿದ್ದರು.

ಕೊಲೆಯಾದ ನಂತರ ಶಿಲ್ಪಾ ತರಾತುರಿಯಲ್ಲಿ ಪತಿಯ ಅಂತ್ಯಕ್ರಿಯೆ ನಡೆಸಿದ್ದರು. ಪುನೀತ್‌ ಸಹೋದರ ಅನುಮಾನಗೊಂಡು ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಶಿಲ್ಪಾಳನ್ನು ವಶಕ್ಕೆ ಪಡೆದ ಪೊಲೀಸರು ವಿಚಾರಣೆ ನಡೆಸಿದಾಗ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಲೆ ಮಾಡಿರುವ ಬಗ್ಗೆ ಒಪ್ಪಿಕೊಂಡಿದ್ದಾರೆ.

ಆರೋಪಿಗಳಿಬ್ಬರನ್ನೂ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು