ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಪರಾಧ ಹಿನ್ನೆಲೆ: ಕಸಾಪ ಶ್ರೀರಂಗಪಟ್ಟಣ ತಾಲ್ಲೂಕು ಘಟಕದ ಅಧ್ಯಕ್ಷರ ವಜಾ

Published : 25 ಸೆಪ್ಟೆಂಬರ್ 2024, 15:32 IST
Last Updated : 25 ಸೆಪ್ಟೆಂಬರ್ 2024, 15:32 IST
ಫಾಲೋ ಮಾಡಿ
Comments

ಶ್ರೀರಂಗಪಟ್ಟಣ (ಮಂಡ್ಯ ಜಿಲ್ಲೆ): ‘ಕನ್ನಡ ಸಾಹಿತ್ಯ ಪರಿಷತ್‌ ತಾಲ್ಲೂಕು ಘಟಕದ ಅಧ್ಯಕ್ಷ ಸ್ಥಾನದಿಂದ ಕುಮಾರ ಎಂ.ಬಿ ಅವರನ್ನು ತೆರವುಗೊಳಿಸಿ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ ಜೋಶಿ ಬುಧವಾರ ಆದೇಶ ಹೊರಡಿಸಿದ್ದಾರೆ.

‘ಕುಮಾರ ಅವರ ವಿರುದ್ಧ ನ್ಯಾಯಾಲಯದಲ್ಲಿ ಅಪರಾಧ ಹಿನ್ನೆಲೆಯ ಮೊಕದ್ದಮೆ ಇದ್ದು, ಪರಿಷತ್ತಿನ ಗೌರವ, ಘನತೆ ಮತ್ತು ಧ್ಯೇಯೋದ್ದೇಶಗಳಿಗೆ ವಿರುದ್ಧವಾಗಿರುವುದರಿಂದ ಅವರನ್ನು ತೆರವು ಮಾಡಲಾಗಿದೆ’ ಎಂದು ಆದೇಶ ಪತ್ರದಲ್ಲಿ ತಿಳಿಸಿದ್ದಾರೆ.

ತೆರವಾದ ಅಧ್ಯಕ್ಷ ಸ್ಥಾನಕ್ಕೆ, ಜಿಲ್ಲಾ ಕಾರ್ಯಕಾರಿ ಸಮಿತಿಯ ಶಿಫಾರಸ್ಸಿನಂತೆ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷ ಸಿದ್ದಲಿಂಗ ಅವರನ್ನು ನಾಮನಿರ್ದೇಶನ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT