ಹಲಗೂರು: ಸಮೀಪದ ದಳವಾಯಿ ಕೋಡಿಹಳ್ಳಿ ಗ್ರಾಮದಲ್ಲಿ ವೀರಶೈವ ಸಮುದಾಯದವರು ಬಸವ ಜಯಂತಿ ಆಚರಿಸಿದರು.

ಗ್ರಾಮದ ಪ್ರಮುಖ ವೃತ್ತದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಬಸವಣ್ಣ ಮತ್ತು ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿಗಳ ಭಾವಚಿತ್ರಕ್ಕೆ ಗ್ರಾಮಸ್ಥರು ಪುಷ್ಪನಮನ ಸಲ್ಲಿಸಿದರು.

ಮುಖಂಡ ರವೀಶ್ ಮಾತನಾಡಿ, ‘ಬಸವಣ್ಣನವರು ಅಂತರ್ಜಾತಿ ವಿವಾಹಕ್ಕೆ ಪ್ರೋತ್ಸಾಹ, ಸಮಾಜದಲ್ಲಿದ್ದ ಜಾತಿ ಪದ್ಧತಿಯನ್ನು ತೊಲಗಿಸಲು ಶ್ರಮಿಸಿದರು’ ಎಂದರು.

ಇಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಹೊರ ರೋಗಿಗಳಿಗೆ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಗ್ರಾಮದ ಮುಖಂಡರಾದ ಜಯಶಂಕರ್ (ಜಯಣ್ಣ), ಮಂಜು, ರಮೇಶ, ಪ್ರವೀಣ, ರಾಜಶೇಖರಪ್ಪ, ನಾಗರಾಜಪ್ಪ, ಕಿರಣ್, ಮಹೇಶ, ರಮೇಶ, ನಾಗೇಶ, ಆಶಾ ರವೀಶ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-40-802049517

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.