ಮಂಡ್ಯ: ‘ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಎಸ್.ಎಂ.ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ’ ಎಂದು ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕಂಬನಿ ಮಿಡಿದಿದ್ದಾರೆ.

‘ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಕೃಷ್ಣ ಅವರು ನೀಡಿರುವ ಕೊಡುಗೆಗಾಗಿ ಕರ್ನಾಟಕ ಸದಾ ಋಣಿಯಾಗಿರುತ್ತದೆ’ ಎಂದು ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.

‘ಕೃಷ್ಣ ಅವರ ದೂರದರ್ಶಿತ್ವ, ಶಿಸ್ತುಬದ್ಧ ಜೀವನ, ಸಜ್ಜನಿಕೆಯ ನಡವಳಿಕೆ ಮತ್ತು ಅಧ್ಯಯನಶೀಲ ಪ್ರವೃತ್ತಿ ಉದಯೋನ್ಮುಖ ರಾಜಕಾರಣಿಗಳಿಗೆ ಮಾದರಿಯಾಗಿದೆ. ಅವರ ಅಗಲಿಕೆಯಿಂದ ನೊಂದಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಭಗವಂತನಲ್ಲಿ ಕೋರುತ್ತೇನೆ’ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.