ಮದ್ದೂರು: ‘ಮದ್ದೂರು ಘಟನೆಗೆ ಪೊಲೀಸರೇ ಕಾರಣ. ನಾನು ಶಾಸಕನಾಗಿದ್ದ ವೇಳೆ ಹಿಂದೆ ಎಂದೂ ಈ ರೀತಿಯ ಘಟನೆಯಾಗಿರಲಿಲ್ಲ. ಇಲ್ಲಿರುವ ಸಿಪಿಐ ಒಬ್ಬ ಅರೆಹುಚ್ಚ. ಮದ್ದೂರಿನ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಬೇಕು’ ಎಂದು ಮಾಜಿ ಶಾಸಕ ಡಿ.ಸಿ. ತಮ್ಮಣ್ಣ ಆಗ್ರಹಿಸಿದರು.

ಪ್ರತಿಭಟನಾ ಮೆರವಣಿಗೆ

ಗಣೇಶ ಮುರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆಯನ್ನು ಖಂಡಿಸಿ, ಮದ್ದೂರು ಪಟ್ಟಣದಲ್ಲಿ ಸೋಮವಾರ ಬೆಳಿಗ್ಗೆ ಬಿಜೆಪಿ, ಬಜರಂಗದಳ ಹಾಗೂ ಹಿಂದುತ್ವಪರ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.

ಪಟ್ಟಣದ ಕೋಟೆ ಬೀದಿಯ ಉಗ್ರನರಸಿಂಹಸ್ವಾಮಿ ದೇವಸ್ಥಾನದ ಆವರಣದಿಂದ ಹೊರಟ ಮೆರವಣಿಗೆಯಲ್ಲಿ ಸಾವಿರಾರು ಹಿಂದುತ್ವ ಪರ ಕಾರ್ಯಕರ್ತರು ಭಾಗವಹಿಸಿ ರಾಜ್ಯ ಸರ್ಕಾರ, ಮುಖ್ಯಮಂತ್ರಿ ಮತ್ತು ಪೊಲೀಸರ ವಿರುದ್ಧ ಘೋಷಣೆಗಳನ್ನು ಮೊಳಗಿಸಿದರು.

ಲಘು ಲಾಠಿ ಪ್ರಹಾರ

ಕೆಮ್ಮಣ್ಣು ನಾಲೆ ವೃತ್ತದ ಸಮೀಪದ ಮಸೀದಿ ಬಳಿ ಮೆರವಣಿಗೆ ಆಗಮಿಸುತ್ತಿದ್ದಂತೆ ಬಿಗುವಿನ ವಾತಾವರಣ ಏರ್ಪಟ್ಟಿತು. ಮಸೀದಿ ಮುಂಭಾಗ ಟೈರುಗಳಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ನಡೆಸಿದವರ ವಿರುದ್ಧ ಧಿಕ್ಕಾರ ಕೂಗಿದರು. ಅಲ್ಲಿಂದ ಕಾರ್ಯಕರ್ತರು ಕದಲದೇ ಇದ್ದಾಗ ಜಿಲ್ಲಾಧಿಕಾರಿ ಕುಮಾರ ಮತ್ತು ಎಸ್ಪಿ ಮಲ್ಲಿಕಾರ್ಜನು ಬಾಲದಂಡಿ ಅವರು ಪ್ರತಿಭಟನಾಕಾರರನ್ನು ಮುಂದೆ ಸಾಗುವಂತೆ ಮನವಿ ಮಾಡಿದರೂ, ಅರ್ಧಗಂಟೆ ಜಗ್ಗಲಿಲ್ಲ.

ನಂತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲವು ಕಿಡಿಗೇಡಿಗಳು ಮಸೀದಿಯತ್ತ ಕಲ್ಲು ತೂರಾಟ ನಡೆಸಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಕಾರ್ಯಕರ್ತರನ್ನು ಚದುರಿಸಿದರು. ನಂತರ ಪರಿಸ್ಥಿತಿ ಸ್ವಲ್ಪ ನಿಯಂತ್ರಣಕ್ಕೆ ಬಂದಿತು.
.ಮದ್ದೂರು|ಕಲ್ಲು ತೂರಾಟ ಖಂಡಿಸಿ ಪ್ರತಿಭಟನೆ, ಲಘು ಲಾಠಿ ಪ್ರಹಾರ: ನಿಷೇಧಾಜ್ಞೆ ಜಾರಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.