ಶುಕ್ರವಾರ, ಜೂನ್ 18, 2021
22 °C

ಶಿವಪುರ ಧ್ವಜ ಸತ್ಯಾಗ್ರಹ ಸೌಧ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಸ್ವಾತಂತ್ಯ ಚಳುವಳಿಗೆ ಸ್ಫೂರ್ತಿಯಾಗಿದ್ದ ಮದ್ದೂರಿನ ಶಿವಪುರ ಧ್ವಜ ಸತ್ಯಗ್ರಹ ಸೌಧಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾಗಿದ್ದ ‘ಭೂತಬಂಗಲೆಯಾದ ಧ್ವಜ ಸತ್ಯಾಗ್ರಹ ಸೌಧ’ ವಿಶೇಷ ವರದಿಗೆ ಸ್ಪಂದಿಸಿದ ಅವರು ಸ್ಥಳಕ್ಕೆ ತೆರಳಿ ಸ್ಮಾರಕ ವೀಕ್ಷಣೆ ಮಾಡಿದರು.

‘ಸ್ಮಾರಕಸೌಧ ಅಭಿವೃದ್ಧಿಗೆ ಪುರಸಭೆ ಯೋಜನೆ ರೂಪಿಸಬೇಕು. ಲೋಕೋಪಯೋಗಿ ಇಲಾಖೆ ಅಧೀನದಲ್ಲಿರುವ ಸೌಧವನ್ನು ಪರಸಭೆಗೆ ಹಸ್ತಾಂತರ ಮಾಡಲು ಕ್ರಮ ಕೈಗೊಳ್ಳಲಾಗುವುದು. ಕಟ್ಟಡವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಲು ಪ್ರಮುಖ ಆದ್ಯತೆ ನೀಡಬೇಕು. ಅನೈತಿಕ ಚಟುವಟಿಕೆಗಳಿಗೆ ಅವಕಾಶ ನೀಡಬಾರದು. ಉದ್ಯಾನ, ಕಾರಂಜಿಯನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

‘ಸ್ವಾತಂತ್ರ್ಯ ಹೋರಾಟದಲ್ಲಿ ಶಿವಪುರ ಧ್ವಜ ಸತ್ಯಾಗ್ರಹ ಇತಿಹಾಸದ ಪುಟಗಳಲ್ಲಿ ಸೇರಿದೆ. ಇಂತಹ ಸ್ಮಾರಕವನ್ನು ಸುಸ್ಥಿತಿಯಲ್ಲಿ ಇಡಬೇಕು. ಸ್ಮಾರಕದ ಮುಖ್ಯ ಕಟ್ಟಡ, ಅನೆಕ್ಸ್‌ ಕಟ್ಟಡವನ್ನು ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಕಾರಣ ಇದಕ್ಕೆ ವಿಶೇಷ ರೂಪ ನೀಡಬೇಕು’ ಎಂದರು.

ಸ್ಧಳದಲ್ಲಿ ಮದ್ದೂರಿನ ತಹಶೀಲ್ದಾರ್ ವಿಜಯ್ ಕುಮಾರ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.