ಮಂಡ್ಯ: ಇಲ್ಲಿಯ ಮಂಡ್ಯ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (ಎಂ.ಡಿ.ಸಿ.ಸಿ) ಆಡಳಿತ ಮಂಡಳಿ ನಿರ್ದೇಶಕರ ಚುನಾವಣೆಗೆ ಸಂಬಂಧಿಸಿದಂತೆ ಒಟ್ಟು 43 ಅಭ್ಯರ್ಥಿಗಳಿಂದ 58 ನಾಮಪತ್ರಗಳು ಸಲ್ಲಿಕೆಯಾಗಿವೆ.

2025–2030ನೇ ಸಾಲಿನ 5 ವರ್ಷಗಳ ಅವಧಿಗೆ ಆಡಳಿತ ಮಂಡಳಿಯ ಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾದ ಶನಿವಾರ 7 ನಾಮಪತ್ರಗಳು ಸಲ್ಲಿಕೆಯಾದವು. ಅ.18ರಿಂದ ನಾಮಪತ್ರ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿತ್ತು.

ಅ.26ರಂದು (ಭಾನುವಾರ) ಬೆಳಿಗ್ಗೆ 11ಕ್ಕೆ ರಿಟರ್ನಿಂಗ್ ಆಫೀಸರ್ ಅವರಿಂದ ನಗರದಲ್ಲಿರುವ ಡಿಸಿಸಿ ಬ್ಯಾಂಕ್ ಪ್ರಧಾನ ಕಚೇರಿಯಲ್ಲಿ ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ನಂತರ ಬ್ಯಾಂಕಿನ ಪ್ರಧಾನ ಕಚೇರಿಯ ನೋಟಿಸ್ ಬೋರ್ಡ್ನಲ್ಲಿ ಕ್ರಮಬದ್ಧವಾಗಿ ನಾಮಪತ್ರ ಸಲ್ಲಿಸಿದ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಯಾಗಲಿದೆ.

ಅ.27ರಂದು (ಸೋಮವಾರ) ಮಧ್ಯಾಹ್ನ 3 ಗಂಟೆ ಒಳಗೆ ಸ್ಪರ್ಧೆಯಲ್ಲಿರುವ ಅಭ್ಯರ್ಥಿಗಳು ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿರುತ್ತದೆ. 3 ಗಂಟೆಯ ನಂತರ ನೋಟಿಸ್ ಬೋರ್ಡ್ನಲ್ಲಿ ಸ್ಪರ್ಧೆಯಲ್ಲಿರುವ ಕ್ರಮಬದ್ಧ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆಯಾಗಲಿದೆ.

ನ.2ರಂದು ಮತದಾನ:

ನ.2ರಂದು (ಭಾನುವಾರ) ಬೆಳಿಗ್ಗೆ 9ರಿಂದ ಸಂಜೆ 4ರವರೆಗೆ ಬೆಂಗಳೂರು–ಮೈಸೂರು ಹೆದ್ದಾರಿ ಪಕ್ಕದಲ್ಲಿರುವ ಮೈಷುಗರ್ ಪ್ರೌಢಶಾಲೆಯಲ್ಲಿ ಮತದಾನ ನಡೆಯಲಿದೆ. ಮತದಾನ ಮುಕ್ತಾಯವಾದ ನಂತರ ಅಂದೇ ಮತ ಎಣಿಕೆ ಕಾರ್ಯ ನಡೆಯಲಿದೆ. ಆನಂತರ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

2 ಕ್ಷೇತ್ರಗಳಲ್ಲಿ ಅವಿರೋಧ ಆಯ್ಕೆ ಸಾಧ್ಯತೆ

ಮಂಡ್ಯ ಡಿಸಿಸಿ ಬ್ಯಾಂಕ್ ಚುನಾವಣೆಯು 12 ನಿರ್ದೇಶಕರ ಸ್ಥಾನಗಳಿಗೆ ನಡೆಯುತ್ತಿದೆ. ಒಟ್ಟು 43 ಅಭ್ಯರ್ಥಿಗಳಿಂದ 58 ನಾಮಪತ್ರಗಳು ಸಲ್ಲಿಕೆಯಾಗಿವೆ. ಮಂಡ್ಯ ಮದ್ದೂರು ಮಳವಳ್ಳಿ ಪಾಂಡವಪುರ ಶ್ರೀರಂಗಪಟ್ಟಣ ಕೆ.ಆರ್.ಪೇಟೆ ಮತ್ತು ನಾಗಮಂಗಲ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರ ಜಿಲ್ಲೆಯಲ್ಲಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘ ಜಿಲ್ಲೆಯಲ್ಲಿನ ಬಳಕೆದಾರರ ಮತ್ತು ಸಂಸ್ಕರಣಾ ಸಹಕಾರ ಸಂಘಗಳು ಮತ್ತು ನಗರ ಸಹಕಾರಿ ಬ್ಯಾಂಕ್ ಹಾಗೂ ವ್ಯವಸಾಯೇತರ ಪತ್ತಿನ ಸಹಕಾರ ಸಂಘ ಮಂಡ್ಯ ಮತ್ತು ಪಾಂಡವಪುರ ಉಪವಿಭಾಗಗಳ ಹಾಲು ಉತ್ಪಾದಕರ ಸಹಕಾರ ಸಂಘ ಹಾಗೂ ಜಿಲ್ಲೆಯಲ್ಲಿನ ಕೈಗಾರಿಕಾ ಸಹಕಾರ ಸಂಘಗಳು ಕಾರ್ಮಿಕ ಸಹಕಾರ ಸಂಘಗಳು ಮತ್ತು ಇನ್ನಿತರೆ ಸಹಕಾರ ಸಂಘಗಳು ಸೇರಿದಂತೆ ಒಟ್ಟು 12 ಕ್ಷೇತ್ರಗಳಿಗೆ ತಲಾ ಒಂದು ನಿರ್ದೇಶಕರ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ನಾಗಮಂಗಲ ತಾಲ್ಲೂಕು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಕ್ಷೇತ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಪುತ್ರ ಸಿ.ಸಚಿನ್ ಮತ್ತು ಜಿಲ್ಲೆಯಲ್ಲಿನ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಕ್ಷೇತ್ರಕ್ಕೆ ಕೆ.ವಿ.ದಿನೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದಾರೆ. ಎರಡೂ ಕ್ಷೇತ್ರಗಳಿಗೆ ಏಕೈಕ ಅಭ್ಯರ್ಥಿಯಿಂದ ನಾಮಪತ್ರ ಸಲ್ಲಿಕೆಯಾಗಿರುವ ಕಾರಣ ಬಹುತೇಕ ಅವಿರೋಧ ಆಯ್ಕೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.