ಮಂಡ್ಯ: ಗಾಂಜಾ ಸಾಗಣೆ ಪ್ರಕರಣದಲ್ಲಿ ಬಂಧಿತನಾಗಿದ್ದ ವಿಚಾರಣಾಧೀನ ಕೈದಿ ಇರ್ಷಾದ್ (44) ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಈಚೆಗೆ ಅನಾರೋಗ್ಯದಿಂದ ಮೃತಪಟ್ಟಿದ್ದಾನೆ.

ಈತ ಮೈಸೂರಿನ ಅಂಬೇಡ್ಕರ್ ನಗರದ ನಿವಾಸಿ. ಜೂನ್ 10ರಂದು ನೋಂದಣಿ ಸಂಖ್ಯೆ ಇಲ್ಲದ ವಾಹನದಲ್ಲಿ ಗಾಂಜಾ ಸಾಗಿಸುತ್ತಿದ್ದಾಗ ಶ್ರೀರಂಗಪಟ್ಟಣ ತಾಲ್ಲೂಕಿನ ಬೊಮ್ಮೂರು ಅಗ್ರಹಾರ ಬಳಿ ಅಬಕಾರಿ ನಿರೀಕ್ಷಕ ವೈ.ಜೆ. ಪ್ರಫುಲ್ಲಚಂದ್ರ ನೇತೃತ್ವದ ತಂಡ ಇರ್ಷಾದ್ ಮತ್ತು ಗುಂಡ್ಲುಪೇಟೆ ಪಟ್ಟಣದ ಅಕ್ಬರ್ ಅಲಿಯಾಸ್ ಮುಬಾರಕ್ ಎಂಬುವರನ್ನು ಬಂಧಿಸಿತ್ತು.

ನಂತರ ಇಬ್ಬರು ಆರೋಪಿಗಳನ್ನು ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಮಂಡ್ಯ ಕಾರಾಗೃಹದಲ್ಲಿದ್ದ ಇರ್ಷಾದ್ ಎರಡೂ ಕಿಡ್ನಿಗಳ ಸಮಸ್ಯೆಯಿಂದ ಬಳಲುತ್ತಿದ್ದ ಕಾರಣ, ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಜುಲೈ 2ರಂದು ಕೆ.ಆರ್. ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಪೊಲೀಸರು ಕರೆದೊಯ್ದಿದ್ದರು. ಜುಲೈ 3ರಂದು ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.