ಶ್ರೀರಂಗಪಟ್ಟಣ: ‘ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಪಾಲಿನ ಹಣವನ್ನು ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ಅನ್ಯಾಯ ಮಾಡುತ್ತಿದ್ದು, ಡಿಸೆಂಬರ್ ನಂತರ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ಮೂರು ಪ್ರಾಂತ್ಯಗಳ ಮುಖ್ಯಸ್ಥ ಸಿ.ಟಿ.ಪಾಟೀಲ್ ಹೇಳಿದರು.

ಪಟ್ಟಣದ ಅಯ್ಯಪ್ಪಸ್ವಾಮಿ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ 7ನೇ ತ್ರೈ ವಾರ್ಷಿಕ ಅಧಿವೇಶನದಲ್ಲಿ ಅವರು ಮಾತನಾಡಿದರು.

‘ಕಾರ್ಮಿಕರ ಮಕ್ಕಳಿಗೆ ಬರುತ್ತಿದ್ದ ಶಿಷ್ಯ ವೇತನವನ್ನು ಸರ್ಕಾರ ತಡೆ ಹಿಡಿದಿದೆ. ಅರ್ಹ ಕಾರ್ಮಿಕರಿಗೆ ಇಎಸ್ಐ, ಪಿ ಎಫ್ ಸಕಾಲಕ್ಕೆ ಸಿಗುತ್ತಿಲ್ಲ. ಕಾರ್ಮಿಕ ಸಚಿವ ಸಂತೋಷ್ ಲಾಡ್ ನಮ್ಮ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಸರ್ಕಾರ ಮತ್ತು ಇಲಾಖೆಯ ಸಚಿವರ ಕಾರ್ಮಿಕ ವಿರೋಧಿ ಧೋರಣೆ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು’ ಎಂದು ತಿಳಿಸಿದರು.

ಸಂಘದ ರಾಜ್ಯ ಘಟಕದ ಗೌರವಾಧ್ಯಕ್ಷ ಎಸ್.ಎನ್.ವಾಸುದೇವ್ ಮಾತನಾಡಿ, ‘15 ವರ್ಷಗಳ ಹಿಂದೆ ಆರಂಭವಾದ ಸಂಘ ಇದೀಗ ರಾಜ್ಯದ 22 ಜಿಲ್ಲೆಗಳಲ್ಲಿ ಶಾಖೆಗಳನ್ನು ಹೊಂದಿದೆ. ಸದ್ಯ 20 ಸಾವಿರಕ್ಕೂ ಹೆಚ್ಚು ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರು ಸಂಘದಲ್ಲಿ ಸದಸ್ಯತ್ವ ಪಡೆದಿದ್ದಾರೆ. ಆದರೆ ಸರ್ಕಾರ ವಯೋಮಿತಿ ಮೀರಿದ ಕಾರ್ಮಿಕರಿಗೆ ಪಿಂಚಣಿ ನೀಡುತ್ತಿಲ್ಲ. ಉಚಿತವಾಗಿ ಸಿಗುತ್ತಿದ್ದ ಆರೋಗ್ಯ ಸೇವೆಯೂ ಸಿಗುತ್ತಿಲ್ಲ. ಸರ್ಕಾರ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಬೇಕು’ ಎಂದು ಒತ್ತಾಯಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಚಿಂತಾಮಣಿ ಕೋಡಳ್ಳಿ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ಮಜ್ದೂರ್ ಸಂಘ (ಬಿಎಂಎಸ್)ದ ರಾಜ್ಯ ಘಟಕದ ಅಧ್ಯಕ್ಷ ಎನ್. ಪ್ರಕಾಶ್, ಪ್ರಧಾನ ಕಾರ್ಯದರ್ಶಿ ಎಚ್.ವಿಶ್ವನಾಥ್, ದಕ್ಷಿಣ ಮಧ್ಯ ಕ್ಷೇತ್ರೀಯ ಪ್ರಭಾರಿ ಎಸ್.ದೊರೈರಾಜು, ಅಖಿಲ ಭಾರತೀಯ ಅಸಂಘಟಿತ ಕ್ಷೇತ್ರ ಉದ್ಯೋಗ ಪ್ರಭಾರಿ ಜಯಂತ್ ದೇಶಪಾಂಡೆ, ಅಸಂಘಟಿತ ಕ್ಷೇತ್ರದ ದಕ್ಷಿಣ ಭಾರತ ಪ್ರಭಾರಿ ಶಂಕರ್ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ನೂರಾರು ಪ್ರತಿನಿಧಿಗಳು ಅಧಿವೇಶನದಲ್ಲಿ ಪಾಲ್ಗೊಂಡಿದ್ದರು.

ಅಧಿವೇಶನದ ಬಳಿಕ ನಡೆದ ಕಾರ್ಮಿಕರ ಮೆರವಣಿಗೆಗೆ ಶಾಸಕ ರಮೇಶ ಬಂಡಿಸಿದ್ದೇಗೌಡ ಚಾಲನೆ ನೀಡಿದರು. ಪಟ್ಟಣದ ವಿವಿಧ ಬೀದಿಗಳಲ್ಲಿ ಕಟ್ಟಡ ನಿರ್ಮಾಣ ಮತ್ತು ಕಾಮಗಾರಿ ಮಜ್ದೂರ್ ಸಂಘದ ನೂರಾರು ಸದಸ್ಯರು ಮೆರವಣಿಗೆ ನಡೆಸಿದರು. ಭಾರತ ಮಾತೆಯ ಭಾವಚಿತ್ರ, ರಾಷ್ಟ್ರಧ್ವಜ ಮತ್ತು ಕೇಸರಿ ಬಾವುಟಗಳು ಗಮನ ಸೆಳೆದವು.