ಭಾನುವಾರ, ಅಕ್ಟೋಬರ್ 25, 2020
27 °C

ಶ್ರೀರಂಗಪಟ್ಟಣ: ಜಿಂಕೆ ಕೊಂಬು, ಆಮೆ ಸಾಗಣೆ: ಆರೋಪಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಶ್ರೀರಂಗಪಟ್ಟಣ: ಜಿಂಕೆ ಕೊಂಬು ಮತ್ತು ಎರಡು ಜೀವಂತ ಆಮೆಗಳನ್ನು ಸಾಗಿಸುತ್ತಿದ್ದ ಆರೋಪಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ತಾಲ್ಲೂಕಿನ ಚನ್ನಹಳ್ಳಿ ಬೋರೆ ಗ್ರಾಮದ ಮಾದಪ್ಪ (38) ಬಂಧಿತ ವ್ಯಕ್ತಿ. ಮಾದಪ್ಪ ಮೈಸೂರು ಕಡೆ ತೆರಳುತ್ತಿದ್ದ ವೇಳೆ ಬಂಧಿಸಿದ್ದು, ಆತನಿಂದ ಎರಡು ಜಿಂಕೆ ಕೊಂಬುಗಳು ಮತ್ತು ಎರಡು ಆಮೆಗಳನ್ನು ವಶಪಡಿಸಿಕೊಳ್ಳಲಾಗಿದೆ.

ಖಚಿತ ಮಾಹಿತಿ ಮೇರೆಗೆ ಬಂಧಿಸಿ ವಿಚಾಣೆಗೆ ಒಳಪಡಿಸಿದ ವೇಳೆ ವನ್ಯಜೀವಿ ಬೇಟೆ ಪ್ರಕರಣ ಬೆಳಕಿಗೆ ಬಂದಿದೆ.
ಆರೋಪಿಯನ್ನು ಅರಣ್ಯ ಇಲಾಖೆಯ ವಶಕ್ಕೆ ನೀಡಲಾಗಿದೆ. ಬಂಧಿತನು ಹಲವು ದಿನಗಳಿಂದ ವನ್ಯ ಜೀವಿಗಳನ್ನು ಬೇಟೆಯಾಡುತ್ತಿದ್ದ ಎಂಬ ಸಂಗತಿ ತಿಳಿದು ಬಂದಿದೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ವಲಯ ಅಣ್ಯಾಧಿಕಾರಿ ಸುನೀತಾ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು