ಭಾನುವಾರ, ಮೇ 16, 2021
22 °C

ಜಿಂಕೆ ಬೇಟೆ : ಇಬ್ಬರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಲಗೂರು: ಮುತ್ತತ್ತಿ ಅರಣ್ಯ ಪ್ರದೇಶದ ತಿರುಗಣೆಮಡು ಬಳಿ ಕಾವೇರಿ ನದಿ ತೀರದಲ್ಲಿ ನೀರು ಕುಡಿಯಲು ಬಂದಿದ್ದ ಜಿಂಕೆಯನ್ನು ಬೇಟೆಯಾಡಿದ್ದ ಇಬ್ಬರು ಆರೋಪಿಗಳನ್ನು ಭಾನುವಾರ ಅರಣ್ಯಾಧಿಕಾರಿ ಬಂಧಿಸಿದ್ದಾರೆ.

ಮುತ್ತತ್ತಿ ಗ್ರಾಮದ ಬಸವರಾಜು, ಕನಕಪುರ ತಾಲ್ಲೂಕಿನ ಮಡಿವಾಳ ಗ್ರಾಮದ ಮುನಿಶಿವ ಬಂಧಿತರು. ಗಂಡು ಜಿಂಕೆಯನ್ನು ಬೇಟೆಯಾಡಿ ಮಾಂಸ ಕತ್ತರಿಸುವ ಸಂದರ್ಭದಲ್ಲಿ ವಲಯ ಅರಣ್ಯಾಧಿಕಾರಿ ಕಿರಣ್‌ಕುಮಾರ್‌ ನೇತೃತ್ವದ ತಂಡ ದಾಳಿ ನಡೆಸಿ ಇಬ್ಬರನ್ನೂ ಸೆರೆ ಹಿಡಿದು, ಜಿಂಕೆ ಕಳೇಬರವನ್ನು ವಶಕ್ಕೆ ಪಡೆಯಿತು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು