ಶನಿವಾರ, 2 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊರಗುತ್ತಿಗೆ ನೌಕರಿಗೂ ನೇರ ಪಾವತಿ ವ್ಯವಸ್ಥೆ ಕಲ್ಪಿಸಲು ಆಗ್ರಹ: ಪ್ರತಿಭಟನೆ

Published 1 ಡಿಸೆಂಬರ್ 2023, 15:21 IST
Last Updated 1 ಡಿಸೆಂಬರ್ 2023, 15:21 IST
ಅಕ್ಷರ ಗಾತ್ರ

ಮಂಡ್ಯ: ನಗರ ಸ್ಥಳೀಯ ಸಂಸ್ಥೆಗಳ ಹೊರಗುತ್ತಿಗೆ ನೌಕರರನ್ನು ಪೌರಕಾರ್ಮಿಕರ ಮಾದರಿಯಲ್ಲಿ ನೇರಪಾವತಿಗೆ ಒಳಪಡಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಸಮಿತಿಯ ಶಿವರಾಜು ಮಳಿಗ ಮಾತನಾಡಿ, ‘ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿರುವ ವಾಹನ ಚಾಲಕರು, ನೀರು ಸರಬರಾಜು ಸಹಾಯಕರು, ಲೋಡರ್ಸ್‌, ಸಹಾಯಕರು, ಕ್ಲೀನರ್‌ ಕಾರ್ಮಿಕರು ಸೇರಿದಂತೆ 15 ಸಾವಿರಕ್ಕೂ ಹೆಚ್ಚು ನೌಕರರನ್ನು ಕಾಯಂ ಮಾಡಬೇಕು’ ಎಂದು ಒತ್ತಾಯಿಸಿದರು.

‘ಕಾರ್ಮಿಕರೆಂದು ಗುರುತಿಸಿದ್ದರೂ ನಗರಾಭಿವೃದ್ಧಿ ಅಧಿಕಾರಿಗಳು ತಾರತಮ್ಯ ಎಸಗಿದ್ದಾರೆ. ನೇರ ಪಾವತಿ ಹಾಗೂ ನೇರ ನೇಮಕಾತಿ ಹೊರಗುತ್ತಿಗೆ ಎಂದು ಅನ್ಯಾಯ ಮಾಡಿದ್ದಾರೆ. ಈಗಲೂ ಹೊರಗುತ್ತಿಗೆಯಲ್ಲಿ ಮುಂದುವರಿಸಿರುವುದು ಸರ್ಕಾರದ ನೀತಿ ಖಂಡನೀಯವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನಕಾರರು ಇಒ ಸಿಂಧೂರಿ ಅವರಿಗೆ ಮನವಿ  ಸಲ್ಲಿಸಿದರು. 

ಸಮಿತಿಯ ಶಂಕರ್‌ ನಿಡಘಟ್ಟ, ಗುರುಲಿಂಗಯ್ಯ, ಪುರುಷೋತ್ತಮ್‌, ಶಂಕರ್, ನವೀನ್‌ಕುಮಾರ್, ಲೋಕೇಶ್‌, ಜಯಲಕ್ಷ್ಮಿ, ಜ್ಯೋತಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT