ಮದ್ದೂರು: ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಪ್ರಚೋದನಾತ್ಮಕ ಹೇಳಿಕೆ ನೀಡಿರುವ ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಕೆಪಿಸಿ ಉಪಾಧ್ಯಕ್ಷ ಎನ್.ಚಲುವರಾಯಸ್ವಾಮಿ ಆಗ್ರಹಿಸಿದರು.

ತಾಲ್ಲೂಕಿನ ಕೌಡ್ಲೆ, ಬೆಕ್ಕಳಲೆ ಗ್ರಾಮಗಳಲ್ಲಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಭೆಯ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಕೀಳು ಮಟ್ಟದ ಹೇಳಿಕೆ ನೀಡುವ ಮೂಲಕ ಅವರು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಅವಮಾನ ಮಾಡಿದ್ದಾರೆ. ಅಶ್ವತ್ಥನಾರಾಯಣ ವಿರುದ್ಧ ಪ್ರಧಾನಿ ನರೇಂದ್ರ ಮೋದಿ, ಜೆ.ಪಿ.ನಡ್ಡಾ, ಅಮಿತ್ ಶಾ, ಬಿ.ಎಸ್.ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಸಿ.ಟಿ.ರವಿ ಯಾವ ನಿರ್ಧಾರ ಕೈಗೊಳ್ಳುತ್ತಾರೆ ಎಂಬುದನ್ನು ಬಹಿರಂಗಪಡಿಸಬೇಕು. ಅವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ಹೋರಾಟಕ್ಕೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮದ್ದೂರು ವಿಧಾನಸಭಾ ಕ್ಷೇತ್ರದ ಸಮಾಜ ಸೇವಕ ಕದಲೂರು ಉದಯ್, ಎಸ್.ಗುರುಚರಣ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕರೆಸಿ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ. ಉದಯ್ ಅವರು ಯಾವುದೇ ಷರತ್ತುಗಳಿಲ್ಲದೆ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತಿಸುತ್ತೇವೆ ಎಂದು ನಮ್ಮ ಈಗಿನ ಅಭ್ಯರ್ಥಿ ಎಸ್.ಗುರುಚರಣ್ ಹೇಳಿದ್ದಾರೆ ಎಂದರು.

ಐದು ವರ್ಷಗಳಲ್ಲಿ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಿದೆ. ಬೈಸಿಕಲ್ ಮತ್ತು ವಿದ್ಯಾರ್ಥಿ ವೇತನ ನೀಡದೆ ವಿದ್ಯಾರ್ಥಿಗಳನ್ನು ವಂಚಿಸಿದೆ. ಮೂರು ನಾಲ್ಕು ತಿಂಗಳಿಗೊಮ್ಮೆ ಹಾಲಿನ ಸಬ್ಸಿಡಿ ನೀಡಲಾಗುತ್ತಿದೆ. ಕೆಆರ್ಎಸ್ ಜಲಾಶಯದಿಂದ ಸರಿಯಾಗಿ ರೈತರ ಬೆಳೆಗೆ ನೀರು ದೊರೆಯುತ್ತಿಲ್ಲ. ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಂಡು ಜನರ ಕಣ್ಣೊರೆಸುವ ಬಜೆಟ್ ಮಂಡಿಸಿರುವ ಸರ್ಕಾರವನ್ನು ಕಿತ್ತೊಗೆಯಲು ಜನರು ತೀರ್ಮಾನ ಮಾಡಬೇಕು ಎಂದರು.

ಜೆಡಿಎಸ್ ಮತ್ತು ಬಿಜೆಪಿ ಎ ಮತ್ತು ಬಿ ಟೀಮ್ ಆಗಿದ್ದು, ಎಲ್ಲ ಚುನಾವಣೆಗಳಲ್ಲೂ ಹೊಂದಾಣಿಕೆ ರಾಜಕೀಯ ಮಾಡುತ್ತವೆ. ಈ ಪಕ್ಷಗಳಿಂದ ರಾಜ್ಯದ ಮತ್ತು ಜಿಲ್ಲೆಯ ಅಭಿವೃದ್ಧಿ ಸಾಧ್ಯವಿಲ್ಲ. ಪ್ರತಿಯೊಬ್ಬರೂ ಈ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಾಂಗ್ರೆಸ್ಗೆ ಮತ ನೀಡಿ ಕಾಂಗ್ರೆಸ್ ಸರ್ಕಾರ ರಚನೆಗೆ ಕಾರಣಕರ್ತರಾಗಬೇಕು ಎಂದು ಹೇಳಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಎನ್.ದಿವಾಕರ್, ರಾಜೇಶ್, ಡಿಸಿಸಿ ಬ್ಯಾಂಕ್ ನಿರ್ದೇಶಕ ಕೆ.ಸಿ.ಜೋಗಿಗೌಡ, ಚಿತ್ರನಟ ಸಚಿನ್ ಚಲುವರಾಯಸ್ವಾಮಿ, ಮನ್ಮುಲ್ ಮಾಜಿ ನಿರ್ದೇಶಕ ಕುಮಾರ್ ಕೊಪ್ಪ, ತಾ.ಪಂ ಮಾಜಿ ಉಪಾಧ್ಯಕ್ಷ ಬಿ.ಎಂ.ರಘು, ಸದಸ್ಯ ತೋಯಜಾಕ್ಷ, ಜಿ.ಪಂ. ಮಾಜಿ ಸದಸ್ಯ ಪ್ರಸನ್ನ, ನಿವೃತ್ತ ಜಿಲ್ಲಾಧಿಕಾರಿ ಕರಿಗೌಡ, ಮುಖಂಡರಾದ ರಮೇಶ್ ಕೊಪ್ಪ, ಕೆ.ಜಿ.ಮೋಹನ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.