ಮಂಗಳವಾರ, ಜೂನ್ 2, 2020
27 °C

ಜೈ ಮಹಾರಾಷ್ಟ್ರ, ಜೈ ಶಿವಾಜಿ ಹೇಳಿಕೆ: ನಾರಾಯಣಗೌಡ ರಾಜೀನಾಮೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೆ.ಆರ್.ಪೇಟೆ: ಜೈ ಮಹಾರಾಷ್ಟ್ರ, ಜೈ ಶಿವಾಜಿ ಎಂದು ಘೋಷಣೆ ಕೂಗಿದ್ದ ಪೌರಾಡಳಿತ ಸಚಿವ ನಾರಾಯಣಗೌಡ ರಾಜೀನಾಮೆ ನೀಡಬೇಕು ಎಂದು ಜಯ ಕರ್ನಾಟಕ ಸಂಘಟನೆಯ ತಾಲ್ಲೂಕು ಘಟಕದ ಸದಸ್ಯರು ಹಾಗೂ ವಕೀಲರ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಪಟ್ಟಣದ ಪ್ರವಾಸಿಮಂದಿರ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಜಯ ಕರ್ನಾಟಕ ಸಂಘಟನೆಯ ಸದಸ್ಯರು, ನಾರಾಯಣಗೌಡರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಹುಟ್ಟಿದ್ದ ನಾರಾಯಣಗೌಡ ಮುಂಬೈಗೆ ಹೋಗಿದ್ದರು. ನಂತರ, ವಾಪಸ್‌ ಆಗಿ ಶಾಸಕರಾಗಿ, ಸಚಿವರಾಗಿದ್ದಾರೆ. ಕನ್ನಡ ನಾಡು, ನುಡಿ, ನೆಲ-ಜಲದ ಬಗ್ಗೆ ಅಭಿಮಾನ ಬೆಳೆಸಿಕೊಳ್ಳದೇ, ಮಹಾರಾಷ್ಟ್ರಕ್ಕೆ ಜೈ, ಮರಾಠಿಗರಿಗೆ ಜೈ ಎಂದು ಘೋಷಣೆ ಕೂಗುವ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ. ನಾರಾಯಣಗೌಡರು ಶಾಸಕರಾಗಲು, ಸಚಿವರಾಗಲು ಅನರ್ಹರು ಎಂದು ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಸ್.ಕುಮಾರ್ ದೂರಿದರು.

ಸಂಘಟನೆಯ ಬಾವಾಜಿ ಚಂದ್ರು, ಮಹೇಶ್, ಮದನ್ ಗೌಡ, ವಿ.ಲೋಕೇಶ್, ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಮಧು, ಜಯಲಕ್ಷ್ಮೀ, ರಾಧಾ, ಗೌರಮ್ಮ, ರಾಜಮ್ಮ ಇದ್ದರು.

ಕಲಾಪದಿಂದ ಹೊರಗುಳಿದ ವಕೀಲರು: ವಕೀಲರ ಸಂಘದ ಸದಸ್ಯರು ಕಲಾಪ ದಿಂದ ಹೊರಗುಳಿಯುವ ಮೂಲಕ ಪ್ರತಿಭಟನೆ ನಡೆಸಿದರು.

ಜವಾಬ್ದಾರಿಯುತ ಸ್ಥಾನದಲ್ಲಿರುವ ನಾರಾಯಣಗೌಡರು ಮಹಾರಾಷ್ಟ್ರಕ್ಕೆ ಜೈಕಾರ ಕೂಗಿರುವುದು ಖಂಡನೀಯ ಎಂದು ವಕೀಲರ ಸಂಘದ ಉಪಾಧ್ಯಕ್ಷ ಕೆ.ಆರ್.ಇಂದ್ರಕುಮಾರ್ ತಿಳಿಸಿದರು.

ಸಂಘದ ಖಜಾಂಚಿ ಬಿ.ಕೆ.ಯೋಗೇಶ್, ಜಂಟಿ ಕಾರ್ಯದರ್ಶಿ ಅನ್ವೇಶ್, ಪ್ರಭಾಕರ್, ಕೆರೆಮೇಗಳ ಕೊಪ್ಪಲು ಶಂಕರೇಗೌಡ, ಜಗದೀಶ್, ನವೀನ್ ಕುಮಾರ್ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು