ಭಾನುವಾರ, 26 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನರನ್ನು ವಂಚಿಸುವ ದೇವೇಗೌಡರ ಕುಟುಂಬ: ಶಾಸಕ ಕೆ.ಎಂ.ಉದಯ್‌

ಕೆ.ಎಂ.ಉದಯ್ ಭಾರತೀನಗರ ಜಿ.ಪಂ ವ್ಯಾಪ್ತಿಯಲ್ಲಿ ಸ್ಟಾರ್ ಚಂದ್ರ ಪರ ಪ್ರಚಾರ
Published 17 ಏಪ್ರಿಲ್ 2024, 13:27 IST
Last Updated 17 ಏಪ್ರಿಲ್ 2024, 13:27 IST
ಅಕ್ಷರ ಗಾತ್ರ

ಭಾರತೀನಗರ: ‘ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ ಕುಟುಂಬ ಮಂಡ್ಯ ಜಿಲ್ಲೆಯ ಜನರನ್ನು ವಂಚಿಸುತ್ತಲೇ ರಾಜಕಾರಣ ಮಾಡುತ್ತಿದೆ’ ಎಂದು ಶಾಸಕ ಕೆ.ಎಂ.ಉದಯ್‌ ಆರೋಪಿಸಿದರು.

ಸಮೀಪದ ಚಂದೂಪುರ ಗ್ರಾಮದಲ್ಲಿ ಭಾರತೀನಗರ ಜಿ.ಪಂ ವ್ಯಾಪ್ತಿಯ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು (ವೆಂಕಟರಮಣಗೌಡ) ಪರ ತೆರೆದ ವಾಹನದಲ್ಲಿ ಪ್ರಚಾರ ನಡೆಸಿ ಮಾತನಾಡಿದರು.

ಮಂಡ್ಯ ಜಿಲ್ಲೆಯಿಂದ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಜಾ.ದಳ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಜಿಲ್ಲೆಯ ಅಭಿವೃದ್ಧಿಗೆ ₹1,800 ಕೋಟಿ ರೂಪಾಯಿಗಳ ಪ್ಯಾಕೇಜ್‌ ನೀಡಿರುವುದಾಗಿ ಘೋಷಣೆ ಮಾಡಿದರು. ಕಾಮಗಾರಿಗಳ ಶಂಕುಸ್ಥಾಪನೆಯನ್ನೂ ನೆರವೇರಿಸಿದರು. ರಾಜ್ಯದ ಮುಖ್ಯಮಂತ್ರಿಯಾಗಿ ಕಾಮಗಾರಿಗೆ ಹಣ ಬಿಡುಗಡೆಯಾಗದೆ ಹೇಗೆ ಶಂಕುಸ್ಥಾಪನೆ ನೆರವೇರಿಸಿದರು? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ ಅಭ್ಯರ್ಥಿ ಸ್ಟಾರ್‌ ಚಂದ್ರು (ವೆಂಕಟರಮಣಗೌಡ), ಮಾಜಿ ಸಚಿವ ಬಿ.ಸೋಮಶೇಖರ್‌. ಎ.ಎಸ್‌.ರಾಜೀವ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT