ಮಂಡ್ಯ: ‘ಸ್ವಚ್ಛ ಭಾರತ ಸ್ವಸ್ಥ ಭಾರತ’ ಕಾರ್ಯಕ್ರಮ ಉದ್ಘಾಟಿಸಿದ ರಾಜಮೂರ್ತಿ

ಮಂಡ್ಯ: ರೋಗ ನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳದಿದ್ದರೆ ಹೊಸ ರೋಗಗಳು ಬಾಧಿಸುತ್ತವರ. ಇದಕ್ಕೆ ಅವಕಾಶ ಕೊಡಬಾರದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ರಾಜಮೂರ್ತಿ ಸಲಹೆ ನೀಡಿದರು.
ನಗರದ ಗಾಂಧಿ ಭವನದಲ್ಲಿ ಅನನ್ಯ ಹೆಲ್ತ್ ಎಜುಕೇಷನ್ ಅಂಡ್ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್, ಜನನಿ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದಲ್ಲಿ ಭಾನುವಾರ ಆಯೋಜಿಸಿದ್ದ ‘ಸ್ವಚ್ಛ ಭಾರತ ಸ್ವಸ್ಥ ಭಾರತ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ವೈದ್ಯಕೀಯ ಕ್ಷೇತ್ರದ ತಂತ್ರಜ್ಞಾನ ಬೆಳೆದಂತೆ ಅಷ್ಟೇ ಪ್ರಮಾಣದಲ್ಲಿ ಹೊಸ ಹೊಸ ರೋಗಗಳು ಉದ್ಭವವಾಗಿವೆ. ನಮ್ಮ ಸಂಸ್ಕೃತಿಯನ್ನು ಬಿಟ್ಟು ಸಮತೋಲನ ಆಹಾರ ತೆಗೆದುಕೊಳ್ಳದೆ ಆಧುನಿಕ ಆಹಾರ ಪದ್ಧತಿಯಿಂದ ರೋಗಗಳಿಗೆ ಆಹ್ವಾನ ನೀಡಿದ್ದೇವೆ. ಇದನ್ನು ಬಿಡಬೇಕು. ಪೌಷ್ಟಿಕ ಆಹಾರ ಸೇವನೆ ಮುಖ್ಯವಾಗಬೇಕು ಎಂದು ಅವರು ಹೇಳಿದರು.
ಬೆಂಗಳೂರಿನ ಸ್ತ್ರೀರೋಗ ತಜ್ಞರಾದ ಡಾ.ಮೀನಾಕ್ಷಿ ಭರತ್ ಮಾತನಾಡಿ, ಪರಿಸರ ಸ್ವಚ್ಛವಾಗಿ ದ್ದರೆ ಜನರ ಆರೋಗ್ಯವೂ ಸದೃಢವಾ ಗಿರುತ್ತದೆ. ಪರಿಸರ ಸ್ವಚ್ಛತೆಗೆ ಕೈಜೋಡಿಸಬೇಕು ಎಂದು ಅವರು ಸಲಹೆ ನೀಡಿದರು.
ಸಂಸ್ಥೆಯ ಅಧ್ಯಕ್ಷ ಎಚ್.ಬಿ.ಬಸವರಾಜು, ಅನನ್ಯ ಹಾರ್ಟ್‌ನ ಬಿ.ಎಸ್.ಅನುಪಮಾ, ಪರ್ಯಾವರಣ ಸಂರಕ್ಷಣ ಮೈಸೂರು ವಿಭಾಗದ ವೆಂಕಟರಾಮು, ಮಂಗಲ ಭಾಗ್ಯ ಭಾಗವಹಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.