ಮಂಡ್ಯ: ಗಣೇಶ ಪ್ರತಿಷ್ಠಾಪನೆಗೆ ಸರ್ಕಾರ ಮಾರ್ಗಸೂಚಿ ಹೊರಡಿಸಿರುವುದನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹಿಸಿ ನಗರದ ಹೊಸಹಳ್ಳಿಯ ಸರ್ ಎಂ.ವಿಶ್ವೇಶ್ವರಯ್ಯ ಗೆಳೆಯರ ಬಳಗದ ಕಾರ್ಯಕರ್ತರು ನಗರದಲ್ಲಿ ಗುರುವಾರ ದಿಢೀರ್ ಪ್ರತಿಭಟನೆ ನಡೆಸಿದರು.

ನಗರದ ಹೊಸಹಳ್ಳಿ ವೃತ್ತದ ಬಳಿ ಕಾರ್ಯಕರ್ತರು ಗಣೇಶ ಮೂರ್ತಿಯನ್ನು ತಲೆ ಮೇಲೆ ಹೊತ್ತುಕೊಂಡು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರವು ಹಿಂದೂಗಳ ಹಬ್ಬಗಳಿಗೆ ಬೆಂಬಲವಾಗಿ ನಿಲ್ಲಬೇಕು. ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಇಷ್ಟೇ ದಿನ ಕೂರಿಸಬೇಕು, ಇಷ್ಟೇ ಜನ ಇರಬೇಕು, ಇಂಥದ್ದೇ ನಿಯಮ ಪಾಲಿಸಬೇಕು ಎಂದು ಹೇಳುವ ಸರ್ಕಾರದ ನಡೆ ಖಂಡನೀಯ. ಇದು ಹಿಂದೂಗಳ ಭಾವನೆಗೆ ಧಕ್ಕೆ ತರುವ ವಿಷಯವಾಗಿದೆ. ತಕ್ಷಣ ಈ ನಿಯಮಗಳನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ರಾಜ್ಯ ಸರ್ಕಾರ ಹೊರಡಿಸಿರುವ ಕೋವಿಡ್ ಮಾರ್ಗಸೂಚಿಗಳನ್ನು ಮೀರುವುದಿಲ್ಲ. ಬೆಂಗಳೂರಿನಲ್ಲಿ ಬಿಬಿಎಂಪಿ ಹೊರಡಿಸಿರುವ ನಿಯಮಗಳನ್ನು ಹಿಂಪಡೆಯಬೇಕು. ಇದಕ್ಕೆ ಬೆಂಗಳೂರಿನಲ್ಲಿ ತೀವ್ರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಅದಕ್ಕೆ ನಮ್ಮ ಬೆಂಬಲವಿದೆ. ಸರ್ಕಾರ ನಿಯಮ ವಾಪಸ್ ಪಡೆಯದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು.

ಮುಖಂಡರಾದ ಸಿದ್ದರಾಜುಗೌಡ, ಹೊಸಹಳ್ಳಿ ಶಿವು, ನಾಗಣ್ಣ ಮಲ್ಲಪ್ಪ, ಎಚ್.ಕೆ.ಮಂಜು, ಸಿದ್ದಲಿಂಗು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.