ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಧಾನಿ ಭೇಟಿ ವೇಳೆ ಭದ್ರತಾ ಲೋಪ: ಪಂಜಾಬ್ ಸರ್ಕಾರವನ್ನು ವಜಾ ಮಾಡಿ– ಬೊಮ್ಮಾಯಿ

Last Updated 5 ಜನವರಿ 2022, 13:54 IST
ಅಕ್ಷರ ಗಾತ್ರ

ನಾಗಮಂಗಲ: 'ಪ್ರಧಾನಿ ನರೇಂದ್ರ ಮೋದಿ ಅವರಿಗೆ ಭದ್ರತೆ ಒದಗಿಸಲು ವಿಫಲವಾಗಿರುವ ಪಂಜಾಬ್ ಸರ್ಕಾರವನ್ನು ವಜಾ ಮಾಡಬೇಕು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳವಾರ ಒತ್ತಾಯಿಸಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು ' ಪ್ರಧಾನಮಂತ್ರಿ ಮುಕ್ತವಾಗಿ ಓಡಾಡಲು ಪಂಜಾಬ್ ಸರ್ಕಾರ ಅವಕಾಶ ನೀಡದಿರುವುದು ಖಂಡನೀಯ. ಪ್ರಧಾನಿಗೆ ಗೌರವ ಕೊಡುವುದು ಎಲ್ಲಾ ರಾಜ್ಯಸರ್ಕಾರಗಳ ಕರ್ತವ್ಯವಾಗಬೇಕು' ಎಂದರು.

'ಭದ್ರತಾ ಲೋಪದ ಬಗ್ಗೆ ತನಿಖೆಯಾಗಬೇಕು. ತಪ್ಪಿತಸ್ಥರಿಗೆ ಉಗ್ರ ಶಿಕ್ಷೆಯಾಗಬೇಕು. ಪಂಜಾಬ್ ಸರ್ಕಾರಕ್ಕೆ ಆಡಳಿತ ನಡೆಸುವ ಯೋಗ್ಯತೆ ಇಲ್ಲ. ಆ ಸರ್ಕಾರವನ್ನು ಕೂಡಲೇ ಬರಕಾಸ್ತ್ ಮಾಡಬೇಕು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT