ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಜಲಪಾತೋತ್ಸವ ನೆಪದಲ್ಲಿ ತಮಿಳುನಾಡಿಗೆ ನೀರು: ಆರೋಪ

ಮುಖ್ಯಮಂತ್ರಿಗೆ ಕಪ್ಪು ಬಾವುಟ ಪ್ರದರ್ಶನ
Published : 6 ಸೆಪ್ಟೆಂಬರ್ 2024, 14:30 IST
Last Updated : 6 ಸೆಪ್ಟೆಂಬರ್ 2024, 14:30 IST
ಫಾಲೋ ಮಾಡಿ
Comments

ಮಂಡ್ಯ: ‘ಜಿಲ್ಲೆಯ ಜೀವನಾಡಿ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುವ ನೆಪದಲ್ಲಿ ಸೆ. 14 ಹಾಗೂ 15ರಂದು ಗಗನಚುಕ್ಕಿ ಜಲಪಾತೋತ್ಸವ ನಡೆಸಲಾಗುತ್ತಿದೆ’ ಎಂದು ಜೆಡಿಎಸ್‌ ರಾಜ್ಯ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಕೆ.ಅನ್ನದಾನಿ ದೂರಿದರು.

‘ಕಾರ್ಯಕ್ರಮಕ್ಕೆ ಬರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪುಬಾವುಟ ಪ್ರದರ್ಶಿಸಿ ಪ್ರತಿಭಟಿಸುತ್ತೇವೆ’ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಕಳೆದ ತಿಂಗಳು ಕೆಆರ್‌ಎಸ್‌ನಿಂದ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹರಿಸಿದ್ದಾಗ ಗಗನಚುಕ್ಕಿ ಜಲಪಾತ ಮೈದುಂಬಿತ್ತು. ಆಗಲೇ ಜಲಪಾತೋತ್ಸವ ಮಾಡಬಹುದಿತ್ತು. ಈಗ, ಉತ್ಸವಕ್ಕಾಗಿ ದೊಡ್ಡ ಪ್ರಮಾಣದಲ್ಲಿ ನೀರನ್ನು ಜಲಾಶಯದಿಂದ ಹರಿಸುವ ಪ್ರಮೇಯ ಏನಿದೆ? ತಮಿಳುನಾಡಿಗೆ ನೀರು ಹರಿಸುವ ಬದಲಿಗೆ, ಮಳವಳ್ಳಿ ಭಾಗದ ಕೆರೆ–ಕಟ್ಟೆಗಳನ್ನು ತುಂಬಿಸಲು ಕಾಳಜಿ ವಹಿಸಬೇಕು’ ಎಂದು ಒತ್ತಾಯಿಸಿದರು.

‘ಶಾಸಕ ಪಿ.ಎಂ. ನರೇಂದ್ರಸ್ವಾಮಿ ಅವರು ಕೆರೆ-ಕಟ್ಟೆ ತುಂಬಿಸದೆ ಜಲಪಾತೋತ್ಸವ ನಡೆಸಿದರೆ ಅದಕ್ಕೆ ಜೆಡಿಎಸ್‌ ಅವಕಾಶ ಕೊಡುವುದಿಲ್ಲ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT