ಪಾಂಡವಪುರ: ಸಾರ್ವಜನಿಕರಿಂದ ಕುಂದುಕೊರತೆ ಅರ್ಜಿ ಸ್ವೀಕರಿಸಿ ನಿಯಮಾನುಸಾರ ಅರ್ಜಿಗಳನ್ನು ವಿಲೇವಾರಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಕುಮಾರ ಅವರು ತಾಲ್ಲೂಕು ಕಚೇರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಖಡಕ್ ಸೂಚನೆ ನೀಡಿದರು.

ಪಟ್ಟಣದ ತಾಲ್ಲೂಕು ಆಡಳಿತ ಸೌಧಕ್ಕೆ ಗುರುವಾರ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಕಚೇರಿಗೆ ಬಂದಿದ್ದ ಸಾರ್ವಜನಿಕರಿಂದ ಕುಂದು ಕೊರತೆಗಳ ಅರ್ಜಿ ಸ್ವೀಕರಿಸಿ, ಕಚೇರಿ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.

ಅಧಿಕಾರಿಗಳ ಕಾರ್ಯವೈಖರಿಯ ಪರಿಶೀಲನೆ ಮತ್ತು ಕೆಲಸ ಕಾರ್ಯಗಳ ವಿಳಂಬದಿಂದ ಆಗುತ್ತಿರುವ ತೊಂದರೆಗಳ ಬಗ್ಗೆ ಸಾರ್ವಜನಿಕರಿಂದ ಮಾಹಿತಿ ಪಡೆದರು. ತಮ್ಮ ಕೆಲಸ ಕಾರಣವಿಲ್ಲದೇ ವಿಳಂಬವಾಗುತ್ತಿರುವುದರಿಂದ ನಿತ್ಯ ಕಚೇರಿಗೆ ಅಲೆಯುವ ಪರಿಸ್ಥಿತಿ ಉಂಟಾಗಿದೆ ಎಂದು ಜಿಲ್ಲಾಧಿಕಾರಿಗಳಿಗೆ ದೂರು ಹೇಳಿದರು.

ಸಾರ್ವಜನಿಕರಿಂದ ದೂರು ಸ್ವೀಕರಿಸಿದ ಜಿಲ್ಲಾಧಿಕಾರಿಗಳು ನಿಯಮಾನುಸಾರ ಅರ್ಜಿಗಳನ್ನು ವಿಲೇವಾರಿ ಮಾಡಬೇಕು. ದಾಖಲೆಗಳು ಸರಿಯಾಗಿದ್ದರೆ ಯಾವುದೇ ಸಬೂಬು ಹೇಳದೆ ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಭೂ ದಾಖಲೆಗಳ ಡಿಜಿಟಿಲೀಕರಣ ಕೊಠಡಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಭೂ ದಾಖಲೆಗಳ ಗಣಕೀಕರಣದ ವೇಗವನ್ನು ಹೆಚ್ಚಿಸಿ ತ್ವರಿತಗೊಳಿಸಬೇಕು ಎಂದು ಸೂಚಿಸಿದರು.

ಕೆಲವು ಪ್ರಕರಣಗಳಿಗೆ ಭೂ ಮಾಪನ ಇಲಾಖೆ ಅಧಿಕಾರಿಗಳಿಂದ ಮಾಹಿತಿ ಪಡೆಯುವುದು ಸೇರಿದಂತೆ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ವಿಭಾಗಗಳ ಕೊಠಡಿಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.

ಕಟ್ಟಡ ಪರಿಶೀಲನೆ: ಸರ್ಕಾರವು ಕೆಆರ್ಐಡಿಎಲ್ ಮೂಲಕ ತಾಲ್ಲೂಕು ಕಚೇರಿ ನವೀಕರಣಕ್ಕೆ ಕಾಮಗಾರಿಗೆ ಒಂದು ಕೋಟಿ ರೂಪಾಯಿ ಅನುದಾನ ನೀಡಿದ್ದು ಈ ಅನುದಾನದಲ್ಲಿ ಕೈಗೊಂಡಿರುವ ಕಾಮಗಾರಿಗಳು ಮತ್ತು ಅದರ ಗುಣಮಟ್ಟವನ್ನು ಜಿಲ್ಲಾಧಿಕಾರಿಗಳು ಪರಿಶೀಲನೆ ನಡೆಸಿದರು. ತಾಲ್ಲೂಕಿನ ಕನಗನಮರಡಿ ಗ್ರಾಮದ ಸರ್ಕಾರಿ ಶಾಲೆಯ ಜಾಗವು ಒತ್ತುವರಿಯಾಗಿರುವುದನ್ನು ತೆರವುಗೊಳಿಸಬೇಕೆಂದು ಬಿಇಒ ಧರ್ಮಶೆಟ್ಟಿ ಅವರಿಗೆ ತಾಕೀತು ಮಾಡಿದರು.

ತಹಶೀಲ್ದಾರ್ ಎಸ್.ಸಂತೋಷ್, ಶಿರಸ್ತೇದಾರ್ ಮೋಹನ್, ಸರ್ವೇಯರ್ ಭಾಸ್ಕರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.