ಹಲಗೂರು: ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಆವರಣದಲ್ಲಿ ದಾನಿಗಳಿಂದ ಸಂಗ್ರಹಿಸಿದ ನೋಟ್ ಪುಸ್ತಕ ಸೇರಿದಂತೆ ಕಲಿಕಾ ಸಾಮಾಗ್ರಿಗಳನ್ನು ಮಕ್ಕಳಿಗೆ ವಿತರಣೆ ಮಾಡಲಾಯಿತು.
ಅಯೋಜಕ ಲಿಂಗಪಟ್ಟಣ ಸುಂದರಪ್ಪ ಮಾತನಾಡಿ, ‘ವಿದ್ಯಾರ್ಥಿ ಜೀವನವು ಬಹಳ ಮಹತ್ವದ ಪಾತ್ರವನ್ನು ನಿರ್ವಹಿಸುತ್ತದೆ. ಮಕ್ಕಳು ತಮ್ಮಲ್ಲಿರುವ ಅನಾಥ ಭಾವನೆಯನ್ನು ಮನಸ್ಸಿನಿಂದ ತೆಗದು ಹಾಕಿ, ಶಿಕ್ಷಣ ಕಲಿಕೆಯ ಕಡೆಗೆ ಹೆಚ್ಚು ಒತ್ತು ಕೊಡಬೇಕು. ಸತತ ಅಭ್ಯಾಸ ಮತ್ತು ಪರಿಶ್ರಮದಿಂದ ಛಲ ಬಿಡದೆ ವಿದ್ಯಾಭ್ಯಾಸ ಮಾಡುವ ಮೂಲಕ ಭವಿಷ್ಯದಲ್ಲಿ ಉತ್ತಮ ಜೀವನ ರೂಪಿಸಿಕೊಳ್ಳಬೇಕು’ ಎಂದು ಕರೆ ನೀಡಿದರು.
ನಿವೃತ್ತ ಶಿಕ್ಷಕ ಎ.ಎಸ್.ದೇವರಾಜು, ತಿಮ್ಮಪ್ಪ, ಡಾ.ಅರುಣ್ ಕುಮಾರ್, ಡಾ.ನಾಗೇಶ್, ಮಲ್ಲಿಕಾರ್ಜುನ, ಶಿವಣ್ಣ, ಅಭಿಜಿತ್, ಕೃಷ್ಣಪ್ಪ ಮಂಗಳಮ್ಮ, ಬೋರೇಗೌಡ, ಸುರೇಶ್, ಹಿಸ್ರತ್ ಬೇಗಂ, ಕುಳ್ಳಯ್ಯ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.