ಶನಿವಾರ, 20 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿ ಅನ್ಬುಕುಮಾರ್‌ ನೇಮಕ

Published 6 ಜುಲೈ 2024, 16:07 IST
Last Updated 6 ಜುಲೈ 2024, 16:07 IST
ಅಕ್ಷರ ಗಾತ್ರ

ಮಂಡ್ಯ: ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿದ್ದ ಡಾ.ಪಿ.ಸಿ. ಜಾಫರ್‌ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ನೇಮಿಸಿ, ತೆರವಾದ ಸ್ಥಾನಕ್ಕೆ ವಿ. ಅನ್ಬುಕುಮಾರ್‌ ಅವರನ್ನು ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ. 

2023ರ ಡಿಸೆಂಬರ್‌ನಲ್ಲಿ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನು ಸರ್ಕಾರ ನೇಮಕ ಮಾಡಿತ್ತು. ಈಗ ಸರ್ಕಾರ ಮಾರ್ಪಾಡು ಮಾಡಿ, ಆದೇಶ ಹೊರಡಿಸಿದೆ. 

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ತಾಲ್ಲೂಕು ಕಚೇರಿ, ಜಿಲ್ಲಾ ಆಸ್ಪತ್ರೆ ಹಾಗೂ ಇತ್ನಿತರೆ ಜಿಲ್ಲೆಯಲ್ಲಿನ ಪ್ರಮುಖ ಕಚೇರಿ ಸ್ಥಳಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಜರಿರಬೇಕು. ಜಿಲ್ಲೆಯ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ (ಕೆಡಿಪಿ) ಸಭೆಗಳಲ್ಲಿ ಸಚಿವರೊಂದಿಗೆ ಭಾಗವಹಿಸಬೇಕು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶದಲ್ಲಿ ತಿಳಿಸಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT