ಕೆ.ಆರ್.ಪೇಟೆ: ‘ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಇಂದು ಮಹತ್ತರ ಸಾಧನೆ ಮಾಡಿದ್ದು, ಯುವ ಜನರು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಪ್ರೊ.ಡಿ.ಎಸ್.ಗುರು ಹೇಳಿದರು.

ಪಟ್ಟಣದ ಕೃಷ್ಣ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಆಯೋಜಿಸಿದ್ದ ಅತ್ಯಾಧುನಿಕ ಸಂಶೋಧನೆಯಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಪಾತ್ರ ಕುರಿತ ಎರಡು ದಿನಗಳ ಅಂತರರಾಷ್ಟ್ರೀಯ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

‘ದೇಶದ ಯುವ ಎಂಜಿನಿಯರುಗಳು ಪ್ರತಿಭಾವಂತರಾಗಿದ್ದು, ವಿಶ್ವದ ಯಾವುದೇ ಎಂಜಿನಿಯರುಗಳು ಒಡ್ದುವ ಸ್ಪರ್ಧೆ ಹಾಗೂ ಸವಾಲುಗಳನ್ನು ಆತ್ಮವಿಶ್ವಾಸದಿಂದ ಎದುರಿಸಿ ಅತ್ಯುತ್ತಮವಾದ ಸಾಧನೆ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ವಿಶ್ವದ ದೊಡ್ಡಣ್ಣ ಎನಿಸಿಕೊಂಡಿರುವ ಅಮೆರಿಕ ಭಾರತದ ಸಾಧನೆಯನ್ನು ಮುಕ್ತಕಂಠದಿಂದ ಶ್ಲಾಘಿಸಿ ನಮ್ಮ ಸಂಶೋಧನೆಗಳನ್ನು ಬೆರಗುಗಣ್ಣಿನಿಂದ ನೋಡುತ್ತಿದೆ. ಆದ್ದರಿಂದ ಗ್ರಾಮಾಂತರ ಪ್ರದೇಶದಲ್ಲಿರುವ ವಿದ್ಯಾರ್ಥಿಗಳು ದೇಶ ಮೆಚ್ಚುವ ಸಾಧನೆ ಮಾಡಬೇಕು’ ಎಂದು ಸಲಹೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಆರ್.ದಿನೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಮಾರಂಭದಲ್ಲಿ ಬೆಂಗಳೂರಿನ ತಾಂತ್ರಿಕ ಶಿಕ್ಷಣ ಇಲಾಖೆಯ ನಿರ್ದೇಶಕ ಡಾ. ಎಚ್.ಪ್ರಸನ್ನ, ಬೆಂಗಳೂರು ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ವಿಶ್ರಾಂತ ಪ್ರಾಧ್ಯಾಪಕ ಎಸ್.ಪಿ. ಬಸವರಾಜು, ರಾಮನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಜಿ.ಪುಂಡರಿಕ, ಬೆಂಗಳೂರು ಕೃಷ್ಣರಾಜೇಂದ್ರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಕೆ.ವೆಂಕಟೇಶ್, ಹಾಸನ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಗಿರೀಶ್, ಚಳ್ಳಕೆರೆ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಎಂ.ಎಂ. ಬೆನಲ್, ಹಾಸನದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಧ್ಯಾಪಕ ಟಿ.ಜಿ. ಬಸವರಾಜ್, ಕುಶಾಲನಗರ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ನಾಗರಘಟ್ಟ ಸತೀಶ್ ಸೇರಿದಂತೆ ರಾಜ್ಯದ ವಿವಿಧ ಎಂಜಿನಿಯರಿಂಗ್ ಕಾಲೇಜುಗಳ ಪ್ರಾಂಶುಪಾಲರು ಮತ್ತು ಪ್ರಾಧ್ಯಾಪಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.