ಮಂಡ್ಯ: ಜಿಲ್ಲಾ ಪಂಚಾಯಿತಿ ನೂತನ ಸಿಇಒ ಆಗಿ ಐಎಎಸ್ ಅಧಿಕಾರಿ ಜಿ.ಆರ್.ಜೆ.ದಿವ್ಯಾ ಪ್ರಭು ಶುಕ್ರವಾರ ಅಧಿಕಾರ ಸ್ವೀಕರಿಸಿದರು.

ಹಿಂದಿನ ಸಿಇಒ ಜುಲ್ಫೀಕರ್ ಉಲ್ಲಾ ಅವರು ನಿವೃತ್ತಿ ಹೊಂದಿದ ಕಾರಣ ಅವರ ಸ್ಥಾನಕ್ಕೆ ಕೆಪಿಎಸ್ಸಿ ಪರೀಕ್ಷಾ ನಿಯಂತ್ರಕಿಯಾಗಿದ್ದ ದಿವ್ಯಾ ಪ್ರಭು ಅವರನ್ನು ನೇಮಕ ಮಾಡಲಾಗಿದೆ.

ಅಧಿಕಾರ ಸ್ವೀಕರಿಸಿದ ದಿವ್ಯಾ ಪ್ರಭು, ಕೋವಿಡ್ ಸಮಯದಲ್ಲಿ ಜನ ಸೇವೆ ಮಾಡಲು ಒಂದು ಸದಾವಕಾಶ ಸಿಕ್ಕಿದ್ದು, ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಜಿಲ್ಲೆಯ ಉಸ್ತುವಾರಿ ಸಚಿವರು, ಜನ ಪ್ರತಿನಿಧಿಗಳ ಸಹಕಾರ ಹಾಗೂ ಸರ್ಕಾರದ ಮಾರ್ಗದರ್ಶನದಲ್ಲಿ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿ ಕೆಲಸ ಮಾಡುತ್ತೇನೆ ಎಂದು
ಹೇಳಿದರು.

ಆರ್ಡಿಪಿಆರ್ ಯೋಜನೆಗಳನ್ನು ಬಳಸಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಪಡಿಸುವೆ. ಪ್ರಸ್ತುತ ಸನ್ನಿವೇಶದಲ್ಲಿ ಕೋವಿಡ್ನಿಂದ ಜನರಿಗೆ ಉದ್ಯೋಗ ಅವಶ್ಯಕವಿದ್ದು, ನರೇಗಾದ ಮೂಲಕ ಜನರಿಗೆ ಉದ್ಯೋಗ ಕೊಡಿಸುವ ಕೆಲಸ ಮಾಡುತ್ತೇನೆ. ನರೇಗಾದಲ್ಲಿ ಮಂಡ್ಯ 6ನೇ ಸ್ಥಾನದಲ್ಲಿದೆ. ಮುಂಬರುವ ದಿನಗಳಲ್ಲಿ ಮೊದಲ ಸ್ಥಾನಕ್ಕೆ ತರಲು ಶ್ರಮಿಸುತ್ತೇನೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.