ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಯಾತುಂಗೆರೆಯಿಂದ ಡಿಕೆಶಿ ರೋಡ್‌ ಶೋ

Last Updated 28 ಮಾರ್ಚ್ 2023, 13:45 IST
ಅಕ್ಷರ ಗಾತ್ರ

ಮಂಡ್ಯ: ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಅಂಗವಾಗಿ ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ತಾಲ್ಲೂಕಿನ ಕ್ಯಾಂತುಗೆರೆಯಿಂದ ಶ್ರೀರಂಗಪಟ್ಟಣ ತಾಲ್ಲೂಕಿನ ಅರಕೆರೆವರೆಗೂ ರೋಡ್‌ಶೋ ನಡೆಸಿದರು.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಿಂದ ಅವರು ರೋಡ್‌ ಶೋ ಆರಂಭಿಸಿದರು. ಕೊತ್ತತ್ತಿ ಮೂಲಕ ಅವರು ಅರಕೆರೆ ತಲುಪಿದರು. ದಾರಿಯುದ್ದಕ್ಕೂ ಕಾಂಗ್ರೆಸ್‌ ಕಾರ್ಯಕರ್ತರು ಸಾಥ್‌ ನೀಡಿದರು. ನೂರಾರು ಕಾರ್ಯಕರ್ತರು ಬೈಕ್‌ ರ‍್ಯಾಲಿಯಲ್ಲಿ ತೆರಳಿದರು, ಪಟಾಕಿ ಸಿಡಿಸಿ ಸಂಭ್ರಮಿಸಿದರು. ಕ್ಯಾಂತುಗೆರೆ ಬಳಿ ಕಾರ್ಯಕರ್ತರು ಕ್ರೇನ್‌ ಮೂಲಕ ಬೃಹತ್‌ ಹಾರ ಹಾಕಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್‌ ‘ಪ್ರಜಾಧ್ವನಿ ಯಾತ್ರೆ ಈ ಭಾಗದಲ್ಲಿ ತಡವಾಗಿತ್ತು. ನಮ್ಮ ನಾಯಕ ಧ್ರುವ ನಾರಾಯಣ್‌ ಮೃತಪಟ್ಟ ಕಾರಣ ಮಂಡ್ಯ ಭಾಗದಲ್ಲಿ ಯಾತ್ರೆ ನಡೆದಿರಲಿಲ್ಲ. ಶ್ರೀರಂಗಪಟ್ಟಣ ಮತಕ್ಷೇತ್ರದ ಜನರ ಮೇಲೆ ನನಗೆ ನಂಬಿಕೆ ಇದೆ. ಈ ಬಾರಿ ಕಾಂಗ್ರೆಸ್‌ ಅಭ್ಯರ್ಥಿ ಜಯಗಳಿಸುತ್ತಾರೆ ಎಂಬ ವಿಶ್ವಾಸವಿದೆ’ ಎಂದರು.

‘ಸರ್‌ ಎಂ.ವಿಶ್ವೇಶ್ವರಯ್ಯ, ಮೈಸೂರು ಮಹಾರಾಜರು ಕೊಟ್ಟಂತ ನಾಡು ಇದು. ಈ ಭಾಗದಲ್ಲಿ ಮಹತ್ವವಾದ ಇತಿಹಾಸವಿದೆ. ಈ ಇತಿಹಾಸವನ್ನು ತಿರುಚಲು ಬಿಜೆಪಿ ಮುಖಂಡರು ಮುಂದಾಗಿದ್ದರು. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ’ ಎಂದರು.

ಈ ಸಂದರ್ಭದಲ್ಲಿ ಎಐಸಿಸಿ ಸದಸ್ಯರಾದ ಎನ್‌.ಚಲುವರಾಯಸ್ವಾಮಿ, ಪಿ.ಎಂ.ನರೇಂದ್ರಸ್ವಾಮಿ, ಮುಖಂಡ ರಮೇಶ್‌ಬಾಬು ಬಂಡಿಸಿದ್ದೇಗೌಡ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT