ಶನಿವಾರ, 3 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಣ ಎಸೆದ ಡಿಕೆಶಿ- ವಿಡಿಯೊ ವೈರಲ್‌

Last Updated 29 ಮಾರ್ಚ್ 2023, 12:36 IST
ಅಕ್ಷರ ಗಾತ್ರ

ಮಂಡ್ಯ: ತಾಲ್ಲೂಕಿನ ಬೇವಿನಹಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಜನರತ್ತ ಹಣ ಎಸೆದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಡಿ.ಕೆ.ಶಿವಕುಮಾರ್‌ ಪ್ರಜಾಧ್ವನಿ ಯಾತ್ರೆ ನಡೆಸಿದರು. ತಾಲ್ಲೂಕಿನ ಕ್ಯಾತುಂಗೆರೆಯಿಂದ ರೋಡ್‌ ಶೋ ಆರಂಭವಾಯಿತು. ಯಾತ್ರೆ ಬೇವಿನಹಳ್ಳಿ ಗ್ರಾಮ ತಲುಪಿದಾಗ ತಾವು ಬರುತ್ತಿದ್ದ ವಾಹನದ ಬಳಿ ಬಂದ ಕೆಲವು ವಾದ್ಯ ಕಲಾವಿದರು ಹಣ ನೀಡುವಂತೆ ಒತ್ತಾಯಿಸಿದರು.

ಆಗ ಡಿಕೆಶಿ ತಮ್ಮ ಜೇಬಿನಿಂದ ₹ 500 ನೋಟುಗಳನ್ನು ತೆಗೆದು ನೀಡಲು ಯತ್ನಿಸಿದರು, ಆದರೆ ಅವರು ವಾಹನದ ಮೇಲಿದ್ದ ಕಾರಣ ಕಲಾವಿದರು ಎಟುಕಲಿಲ್ಲ. ಆಗ ಡಿಕೆಶಿ ನೋಟಗಳನ್ನುಕಲಾವಿದರೂ ಇದ್ದ ಜನರತ್ತ ಎಸೆದರು.

ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಚುನಾವಣಾಧಿಕಾರಿಗಳು ಡಿಕೆಶಿ ವಿರುದ್ಧ ಪ್ರಕರಣ ದಾಖಲು ಮಾಡಬೇಕು ಎಂದು ಕೆಲವರು ಒತ್ತಾಯಿಸಿದ್ದಾರೆ. ಬುಧವಾರ ಚುನಾವಣಾ ನೀತಿ ಸಂಹಿತೆ ಜಾರಿಯಾಗಿರುವ ಹಿನ್ನೆಲೆಯಲ್ಲಿ ಈ ವಿಡಿಯೊ ಹೆಚ್ಚು ವೈರಲ್‌ ಆಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT