ಮಂಡ್ಯ: ವಿಜಯಪುರ ಕ್ಷೇತ್ರದ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ದಲಿತ ಮಹಿಳೆಯರನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ದಲಿತ ಸಂಘಟನೆಯ ಕಾರ್ಯಕರ್ತರು ನಗರದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು.

ನಗರದ ಜೆ.ಸಿ.ವೃತ್ತದಲ್ಲಿ ಜಮಾವಣೆಗೊಂಡ ಕಾರ್ಯಕರ್ತರು, ಯತ್ನಾಳರ ಪ್ರತಿಕೃತಿಯನ್ನು ಕತ್ತೆ ಮೇಲೆ ಕೂರಿಸಿ ಮೆರವಣಿಗೆ ನಡೆಸಿದರು. ಪ್ರತಿಕೃತಿ ದಹಿಸಲು ಮುಂದಾದಾಗ ಪೊಲೀಸರು ತಡೆದರು. ಯತ್ನಾಳರ ವಿರುದ್ಧ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ದಲಿತ ಮಹಿಳೆಯರು 2028ಕ್ಕೆ ಸೋಲಿಸಿ ಮನೆಗೆ ಕಳುಹಿಸುತ್ತಾರೆ. ಇವರ ವಿರುದ್ಧ ರಾಜ್ಯದಾದ್ಯಂತ ದಲಿತರು ಕೇಸ್ ಹಾಕಲಿದ್ದಾರೆ ಎಂದರು.

ದಲಿತ ಸಂಘಟನೆ ಮುಖಂಡರಾದ ಚೀರನಹಳ್ಳಿ ಲಕ್ಷ್ಮಣ್, ನರಸಿಂಹಮೂರ್ತಿ, ಎಂ.ವಿ.ಕೃಷ್ಣ, ನಿರಂಜನ್, ಎಚ್.ಡಿ.ಜಯರಾಂ, ಆಟೋ ಕೃಷ್ಣ, ನಂಜುಂಡಮೌರ್ಯ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.