ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇರವೇತನಕ್ಕೆ ಒತ್ತಾಯಿಸಿ ಚಾಲಕರ ಪ್ರತಿಭಟನೆ

Last Updated 29 ಸೆಪ್ಟೆಂಬರ್ 2020, 15:04 IST
ಅಕ್ಷರ ಗಾತ್ರ

ಮಂಡ್ಯ: ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಪಾಲಿಕೆಗಳಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಾಹನ ಚಾಲಕರು ಮತ್ತು ವಾಟರ್‌ಮನ್‌ಗಳಿಗೆ ನೇರವೇತನ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಹೊರಗುತ್ತಿಗೆ ವಾಹನ ಚಾಲಕರ ಸಂಘದ ಜಿಲ್ಲಾ ಘಟಕದ ಸದಸ್ಯರು ಮಂಗಳವಾರ ನಗರಸಭೆ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ನಗರಗಳ ಸ್ವಚ್ಛತೆ ನಿರ್ವಹಣೆಯಲ್ಲಿ ತ್ಯಾಜ್ಯ ಸಾಗಾಣಿಕೆ ವಾಹನ ಚಾಲಕರ ಪಾತ್ರ ಅಪಾರವಾಗಿದ್ದು, ಪೌರಕಾರ್ಮಿಕರಿಗೆ ಸಮಾನವಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇವೆ. ಅವರಿಗೆ ನೇರಪಾವತಿ ನೀಡಲಾಗುತ್ತಿದ್ದು, ಆದರೆ ನಮಗೆ ಏಜೆನ್ಸಿಗಳು ಸಮರ್ಪಕವಾಗಿ ವೇತನ ನೀಡುತ್ತಿಲ್ಲ. ಕೂಡಲೇ ಹೊರಗುತ್ತಿಗೆ ಪದ್ಧತಿ ರದ್ದುಪಡಿಸಿ ನೇರವೇತನ ಜಾರಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ರಾಜ್ಯದಲ್ಲಿ 10 ಸಾವಿರಕ್ಕೂ ಹೆಚ್ಚು ಮಂದಿ ಚಾಲಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಜತೆಗೆ ವಾಟರ್‌ಮನ್‌ಗಳು ಸಹ ಯಾವುದೇ ಭದ್ರತೆಯಿಲ್ಲದೇ ಕನಿಷ್ಠ ವೇತನಕ್ಕೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಹೊರಗುತ್ತಿಗೆ ಪದ್ಧತಿಯಲ್ಲಿ ವೇತನ ಪಾವತಿ ಮಾಡುವುದರಿಂದ ಜಿಎಸ್‌ಟಿ ಹೆಸರಿನಲ್ಲಿ ಕೇಂದ್ರ ಸರ್ಕಾರಕ್ಕೆ ಕೊಡುತ್ತಿರುವ ₹100 ಕೋಟಿಗೂ ಹೆಚ್ಚಿನ ಹಣ ಉಳಿತಾಯವಾಗಲಿದೆ. ಏಜೆನ್ಸಿಗಳಿಗೆ ನೀಡುವ ಸೇವಾ ಶುಲ್ಕವು ಉಳಿಯಲಿದೆ. ಸರ್ಕಾರದ ಬೊಕ್ಕಸ ಬರಿದು ಮಾಡುವ ವ್ಯವಸ್ಥೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಸಂಘದ ರಾಜ್ಯ ಘಟಕದ ಅಧ್ಯಕ್ಷ ಎಂ.ಬಿ.ನಾಗಣ್ಣಗೌಡ, ಜಿಲ್ಲಾ ಘಟಕದ ಅಧ್ಯಕ್ಷ ದಿನೇಶ್, ರವಿ, ಮಹೇಶ್, ಶೇಖರ್, ಮೋಹನ್‍ಕುಮಾರ್, ದೀಪಕ್ ಸೇರಿದಂತೆ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT