ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್ ವೇ: ವಿರುದ್ಧ ದಿಕ್ಕಿನಲ್ಲಿ ಚಾಲನೆ; 6 ವಾಹನ ವಶ

Published 15 ಜೂನ್ 2024, 15:27 IST
Last Updated 15 ಜೂನ್ 2024, 15:27 IST
ಅಕ್ಷರ ಗಾತ್ರ

ಶ್ರೀರಂಗಪಟ್ಟಣ: ಬೆಂಗಳೂರು– ಮೈಸೂರು ಎಕ್ಸ್‌ಪ್ರೆಸ್‌ ವೇನಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಿಸುತ್ತಿದ್ದ 6 ವಾಹನಗಳನ್ನು ಗ್ರಾಮಾಂತರ ಠಾಣೆ ಪೊಲೀಸರು ಶನಿವಾರ ವಶಪಡಿಸಿಕೊಂಡಿದ್ದಾರೆ.

ಗ್ರಾಮಾಂತರ ಠಾಣೆ ಸಿಪಿಐ ಬಿ.ಜಿ. ಕುಮಾರ್‌ ನೇತೃತ್ವದ ಪೊಲೀಸರ ತಂಡ ಒಂದು ಟಿಪ್ಪರ್‌, ಮೂರು ಕಾರು ಮತ್ತು ಎರಡು ಗೂಡ್ಸ್‌ ವಾಹನಗಳನ್ನು ವಶಕ್ಕೆ ಪಡೆದಿದೆ. ತಾಲ್ಲೂಕಿನ ಗಣಂಗೂರು ಟೋಲ್‌ನಿಂದ ವಿರುದ್ಧ ದಿಕ್ಕಿನಲ್ಲಿ, ಟೋಲ್‌ನಿಂದ ಮೈಸೂರು ಮತ್ತು ಮಂಡ್ಯದ ಕಡೆಗೆ ಚಲಿಸುತ್ತಿದ್ದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

ಟೋಲ್ ಶುಲ್ಕ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಕೆಲವರು ಟೋಲ್‌ ತನಕ ಬಂದು ನಂತರ ವಿರುದ್ಧ ದಿಕ್ಕಿನಲ್ಲಿ ವಾಪಸಾಗುತ್ತಿದ್ದಾರೆ. ಇದರಿಂದ ಅಪಘಾತಗಳು ನಡೆಯುತ್ತಿವೆ. ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ವಾಹನ ಚಲಾಯಿಸುವ ಚಾಲಕರ ಚಾಲನಾ ಪರವಾನಗಿಯನ್ನು ಮೂರು ತಿಂಗಳವರೆಗೆ ಅಮಾನತು ಮಾಡಲಾಗುತ್ತದೆ. ದಂಡವನ್ನೂ ವಿಧಿಸಲಾಗಿತ್ತದೆ. ಮತ್ತೆ ಅದೇ ತಪ್ಪು ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಬಿ.ಜಿ. ಕುಮಾರ್‌ ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT