ಬುಧವಾರ, ಜುಲೈ 28, 2021
29 °C

ನಾಗಮಂಗಲ: ಬಟ್ಟೆ ತೊಳೆಯಲು ಹೋಗಿದ್ದ ತಾಯಿ, ಇಬ್ಬರು ಮಕ್ಕಳು ನೀರುಪಾಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಾಗಮಂಗಲ: ಬೀರನಹಳ್ಳಿ ಗ್ರಾಮದಲ್ಲಿ ಕೆರೆಗೆ ಬಟ್ಟೆ ತೊಳೆಯಲು ಹೋದ ತಾಯಿ‌ ಹಾಗೂ ಇಬ್ಬರು ಮಕ್ಕಳು ನೀರುಪಾಲಾಗಿದ್ದಾರೆ.

ತಾಲ್ಲೂಕಿನ ಬೋಗಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೀರನಹಳ್ಳಿ ಗ್ರಾಮದ ಗೀತಾ ನರಸಿಂಹಯ್ಯ (38) ಮಕ್ಕಳಾದ ಸವಿತಾ (19) ಮತ್ತು ಸೌಮ್ಯಾ(14) ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟಿದ್ದಾರೆ.

ಕೆರೆಯಲ್ಲಿ ಬಿಂದಿಗೆ ತೇಲುತ್ತಿರುವುದನ್ನು ಹಾಗೂ ದಡದಲ್ಲಿ ಬಟ್ಟೆಗಳು ಬಿದ್ದಿರುವುದನ್ನು ಗಮನಿಸಿ ಶಂಕೆಗೊಂಡು ಗ್ರಾಮಸ್ಥರು ಕೆರೆಯಲ್ಲಿ ಹುಡುಕಾಡಿದಾಗ ಮೃತದೇಹಗಳು ಸಿಕ್ಕಿವೆ. ಮೊದಲು ಒಬ್ಬರು ಆಕಸ್ಮಿಕವಾಗಿ ಕೆರೆಗೆ ಬಿದ್ದಿದ್ದು ಉಳಿದವರು ಅವರನ್ನು ರಕ್ಷಿಸಲು ಹೋಗಿ ನೀರಿನಲ್ಲಿ ಮುಳುಗಿರಬಹುದು ಎಂದು ಅಂದಾಜಿಸಲಾಗಿದೆ.

ನಾಗಮಂಗಲ ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು