ಮಂಡ್ಯ: ಇರಾನ್ ಪರಮೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆ ಖಂಡನೀಯವಾದುದು ಹಾಗೂ ಕೇಂದ್ರ ಸರ್ಕಾರವು ವಿಶ್ವಶಾಂತಿಯನ್ನು ಮೂಲ ಮಾರ್ಗವೆಂದು ಹೇಳಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಮೌನ ಪ್ರತಿಭಟನೆ ನಡೆಸಿದರು.

ನಗರದ ಸರ್ಎಂ.ವಿ.ಪ್ರತಿಮೆ ಎದುರು ಜಮಾವಣೆಗೊಂಡು ಕಾರ್ಯಕರ್ತರು ‘ಯುದ್ಧ ಬೇಡ – ಬುದ್ಧ ಬೇಕು’ ಹೆಸರಿನಲ್ಲಿ ಜಿಲ್ಲಾಧಿಕಾರಿ ಕಚೇರಿವರೆಗೆ ಮೌನ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿ ಕಚೇರಿ ಸಹಾಯಕಿ ರೋಹಿಣಿ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದರು.ಎಲ್ಲೆಡೆ ಶಾಂತಿ ನೆಲೆಸುವಂತೆ ಆಗಬೇಕು. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನಡೆದುಕೊಳ್ಳಬೇಕು ಎಂದು ಒತ್ತಾಯಿಸಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ವ್ಯಾಪಾರೀಕರಣ ನೀತಿಯಿಂದ ಜಗತ್ತಿನ ದೇಶಗಳನ್ನು ಬೆದರಿಕೆ ಒಡ್ಡುವ ರೀತಿಯಲ್ಲಿ ನಡೆದುಕೊಳ್ಳುತ್ತಿರುವುದು ಕಂಡು ಬರುತ್ತಿದೆ. ಭಾರತ ಸರ್ಕಾರವು ವಿಶ್ವ ವಿರೋಧಿ ಮತ್ತು ಮಾನವೀಯತೆ ವಿರೋಧಿ ಯುದ್ಧವನ್ನು ತೀವ್ರವಾಗಿ ಖಂಡಿಸಬೇಕಿದೆ. ಇರಾನ್ ವಿರುದ್ಧ ಅಮೆರಿಕಾ, ಇಸ್ರೇಲ್ ನಡೆಸುತ್ತಿರುವ ಯುದ್ಧವನ್ನು ನಿಲ್ಲಿಸುವಂತೆ ಹಾಗೂ ವಿಶ್ವಸಂಸ್ಥೆಯಲ್ಲಿ ಕೇಂದ್ರ ಸರ್ಕಾರವು ಒತ್ತಾಯಿಸಬೇಕು ಎಂದು ಆಗ್ರಹಿಸಿದರು.

ಅಸ್ಪೃಶ್ಯ ಜಾತಿಗಳಿಗೆ ಅನ್ಯಾಯ: ಒಳ ಮೀಸಲಾತಿ ಇಲ್ಲದೆಯೇ 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ನಿರ್ಧಾರವು ಸರಿಯಲ್ಲ. ಶೇ.50ರ ಮೀಸಲಾತಿ ಮಿತಿಯಲ್ಲಿಯೇ ಒಳ ಮೀಸಲಾತಿ ನೀತಿಯ ಎ–ಶೇ.5.5, ಬಿ–5.5, ಸಿ–ಶೇ.4ರ ಪ್ರವರ್ಗವಾರು ಶೇ.15 ರಷ್ಟು ಮೀಸಲು 8500 ಹುದ್ದೆಗಳನ್ನು ಸಮಾನ ಹಂಚಿಕೆ ಮಾಡಿ ತುಂಬಬೇಕು. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರತಿಭಟನಾ ನಿರತರು ಒತ್ತಾಯಿಸಿದರು.

ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ವೆಂಕಟಗಿರಿಯಯ್ಯ, ಮೈಸೂರು ವಿಭಾಗೀಯ ಸಂಚಾಲಕ ಕೆ.ಎಂ.ಅನಿಲ್ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ಬಿ.ಆನಂದ್, ಮುಖಂಡರಾದ ವೆಂಕಟೇಶ್, ಗೀತಾ, ಮುತ್ತುರಾಜ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.