ಶುಕ್ರವಾರ, 19 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಮೇಲುಕೋಟೆ | ವಿದ್ಯುತ್ ಸ್ಪರ್ಶ; ರೈತ ಸಾವು

Published 27 ಜೂನ್ 2024, 14:02 IST
Last Updated 27 ಜೂನ್ 2024, 14:02 IST
ಅಕ್ಷರ ಗಾತ್ರ

ಮೇಲುಕೋಟೆ: ಸಮೀಪದ ಅಮೃತಿ ಗ್ರಾಮದಲ್ಲಿ ಗುರುವಾರ ವಿದ್ಯುತ್ ತಗುಲಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಕುಮಾರ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದಾಗ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ತುಳಿದಿದ್ದಾರೆ. ರೈತನ ಚೀರಾಟ ಕೇಳಿ ಅಕ್ಕಪಕ್ಕದ ಜಮೀನಿನಲ್ಲಿದ್ದವರು ಸಹಾಯಕ್ಕೆ ಬರುವಷ್ಟರಲ್ಲಿ ಮೃತಪಟ್ಟಿದ್ದಾರೆ.

ಮೃತನಿಗೆ ಪತ್ನಿ ರೇಖಾ, ಇಬ್ಬರು ಮಕ್ಕಳಿದ್ದಾರೆ. ಘಟನೆ ಸಂಬಂಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪಟ್ಟಣದ ಉಪವಿಭಾಗೀಯ ಆಸ್ಪತ್ರೆಗೆ ಭೇಟಿ ನೀಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಚ್.ತ್ಯಾಗರಾಜು, ‘ಮೃತರ ಕುಟುಂಬದರಿಗೆ ಸಾಂತ್ವನ ಹೇಳಿ ಕುಟುಂಬಕ್ಕೆ ಸೆಸ್ಕ್ ಇಲಾಖೆ ಸೂಕ್ತ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT