ಶುಕ್ರವಾರ, ಮಾರ್ಚ್ 31, 2023
22 °C

ಶಾರ್ಟ್‌ ಸರ್ಕಿಟ್‌: 2 ಎಕರೆ ಕಬ್ಬು ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ತಾಲ್ಲೂಕಿನ ಬಿ.ಹೊಸೂರು ಗ್ರಾಮದ ರೈತ ಎಚ್‌.ಸಿದ್ದಯ್ಯ ಅವರಿಗೆ ಸೇರಿದ ಕಬ್ಬಿನ ಗದ್ದೆಗೆ ವಿದ್ಯುತ್‌ ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ತಗುಲಿ ಎರಡು ಎಕರೆಗೂ ಹೆಚ್ಚು ಬೆಳೆ ಭಸ್ಮವಾಗಿರುವ ಘಟನೆ ಗುರುವಾರ ನಡೆದಿದೆ.

ಸಾಲ ಮಾಡಿ ತಮ್ಮ ಜಮೀನಿನಲ್ಲಿ ಕಬ್ಬು ಬೆಳೆದಿದ್ದರು, ಈಗಾಗಲೇ ಕಟಾವಿಗೆ ಬಂದಿತ್ತು. ಕಬ್ಬು ಕಟಾವು ಮಾಡುವ ಕೆಲಸಗಾರರಿಗೆ ಮುಂಗಡ ಹಣ ನೀಡಲಾಗಿತ್ತು. ನಾಗಮಂಗಲ ಮುಖ್ಯ ವಿದ್ಯುತ್ ಘಟಕಕ್ಕೆ ಸಂಪರ್ಕಿಸುವ ವಿದ್ಯುತ್‌ ತಂತಿ ಈ ಭಾಗದಲ್ಲಿ ಹಾದು ಹೋಗಿದ್ದು ಶಾರ್ಟ್‌ ಸರ್ಕಿಟ್‌ನಿಂದ ಬೆಂಕಿ ಹೊತ್ತಿಕೊಂಡಿದೆ.

ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಕಬ್ಬು ಸುಟ್ಟು ಹೋಗಿದ್ದು ರೈತ ಕಂಗಾಲಾಗಿದ್ಧಾರೆ. ಸುಟ್ಟು ಹೋದ ಕಬ್ಬಿನ ಬೆಳೆಗೆ ಸೂಕ್ತ ಪರಿಹಾರ ನೀಡಬೇಕು ಎಂದು ಸಿದ್ದಯ್ಯ ಅವರ ಮಕ್ಕಳಾದ ನಾಗರಾಜು ಮತ್ತು ಶಿವಸ್ವಾಮಿ ಅವರು ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು