ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಧರ್ಮಸ್ಥಳ ಸಂಘದಿಂದ ಮಹಿಳೆಯರ ಶೋಷಣೆ: ಹರಿದಾಡಿದ ಶಾಸಕರ ವಿಡಿಯೊ

Published : 18 ಸೆಪ್ಟೆಂಬರ್ 2024, 4:30 IST
Last Updated : 18 ಸೆಪ್ಟೆಂಬರ್ 2024, 4:30 IST
ಫಾಲೋ ಮಾಡಿ
Comments

ಹಲಗೂರು (ಮಂಡ್ಯ ಜಿಲ್ಲೆ): ‘ಮಹಿಳೆಯರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘದಿಂದ ಹೊರಬಂದು ಸರ್ಕಾರದಿಂದ ರಚಿನೆಯಾಗಿರುವ ಸಂಜೀವಿನಿ ಒಕ್ಕೂಟ ಸೇರುವ ಮೂಲಕ ಸ್ವಗ್ರಾಮದಲ್ಲಿ ಆರ್ಥಿಕ ಚಟುವಟಿಕೆ ಆರಂಭಿಸಿ, ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು’ ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರು ಸೋಮವಾರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ವಿಡಿಯೊ ಮಂಗಳವಾರ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿತ್ತು.

ಸಮೀಪದ ಹಾಡ್ಲಿ ಗ್ರಾಮದಲ್ಲಿ ₹10 ಲಕ್ಷ ವೆಚ್ಚದಲ್ಲಿ ನೂತನ ಗ್ರಾಮ ಪಂಚಾಯತಿ ಕಚೇರಿ ನಿರ್ಮಾಣ ಕಾಮಗಾರಿಗೆ ಸೋಮವಾರ ಭೂಮಿಪೂಜೆ ಮಾಡಿದ್ದ ಅವರು, ‘ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಘವು ಮಹಿಳಾ ಸಂಘಗಳಿಗೆ ತ್ವರಿತ ಗತಿಯಲ್ಲಿ ಸಾಲ ನೀಡಿ, ಅತಿ ಹೆಚ್ಚು ಬಡ್ಡಿ ವಸೂಲಿ ಮಾಡುವ ಮೂಲಕ ಬಡಜನರನ್ನು ಶೋಷಣೆ ಮಾಡಲು ಹೊರಟಿದೆ. ಧರ್ಮದ ಕಾರ್ಯ ಮಾಡುತ್ತಿಲ್ಲ’ ಎಂದಿದ್ದರು.

‘ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ಬಡವರು ಮತ್ತು ಮಹಿಳೆಯರ ಪರವಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಮೂಲಕ ಎಲ್ಲಾ ಬಗೆಯ ಜನರ ಶ್ರೇಯೋಭಿವೃದ್ದಿಗಾಗಿ ನಿರಂತರವಾಗಿ ಕೆಲಸ ಮಾಡುತ್ತಿದೆ’ ಎಂದು ಪ್ರತಿಪಾದಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT