ಮಂಡ್ಯ: ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಿಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೆ.ಆರ್. ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ.ಡಿ (55) ಮೃತರು.

ಕೃಷಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚೆಲುವರಾಯಸ್ವಾಮಿ ಅವರು ಇಂದು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಭೇಟಿ ನೀಡಿ ಮೃತ ರೈತನಿಗೆ ಅಂತಿಮ ನಮನ ಸಲ್ಲಿಸಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಬಳಿಕ ಮೃತ ರೈತನ ಕುಟುಂಬಸ್ಥರಿಗೆ ₹5 ಲಕ್ಷ ಪರಿಹಾರವನ್ನು ಘೋಷಿಸಿದ್ದಾರೆ. ಅಲ್ಲದೆ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಹೆಚ್ಚುವರಿ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದಾರೆ.

ಮೃತ ರೈತನ ಜಾಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ಸದರಿ ಜಾಗವನ್ನು ಜಂಟಿ ಸರ್ವೆ ನಡೆಸಿ ಸ್ಥಳವೇನಾದರೂ ಅರಣ್ಯ ಇಲಾಖೆಗೆ ಒಡೆತನಕ್ಕೆ ಸೇರದಿದ್ದರೆ ಸದರಿ ಜಾಗವನ್ನು ಕುಟುಂಬಸ್ಥರಿಗೆ ನೀಡುವುದಾಗಿ ಸಚಿವರು ಭರವಸೆ ನೀಡಿದ್ದಾದರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಡಾ. ಕುಮಾರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
.ಮಂಡ್ಯ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು .ಭೂಸ್ವಾಧೀನ; ಸಿಗದ ಪರಿಹಾರ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.