ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷಮೆ ಕೇಳಿ, ರೈತರ ಬಿಡುಗಡೆಗೊಳಿಸಿ: ಮದ್ದೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

Published 17 ಫೆಬ್ರುವರಿ 2024, 14:10 IST
Last Updated 17 ಫೆಬ್ರುವರಿ 2024, 14:10 IST
ಅಕ್ಷರ ಗಾತ್ರ

ಮದ್ದೂರು: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರನ್ನು ಬಂಧನ ಮಾಡಿರುವುದನ್ನು ಖಂಡಿಸಿ ಹಾಗೂ ಕೇಂದ್ರ ಸರ್ಕಾರದ ನಡೆ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಶನಿವಾರ ಪ್ರತಿಭಟನೆ ನಡೆಸಿದರು.

ಈ ವೇಳೆ ರೈತ ಮುಖಂಡ ಸೊ. ಸಿ ಪ್ರಕಾಶ್ ಮಾತನಾಡಿ, ಕೇಂದ್ರ ಸರ್ಕಾರವು ರೈತರ ಹಿತ ಕಾಯುವುದರ ಬದಲು ರೈತರನ್ನು ಬಂಧಿಸಿರುವುದು ಖಂಡನೀಯ’ ಎಂದರು.

ರೈತ ಸಂಘದ ಹಿರಿಯ ಮುಖಂಡ ಕೀಳಘಟ್ಟ ನಂಜುಂಡಯ್ಯ ಮಾತನಾಡಿ,‘ರೈತರನ್ನು ತಡೆದು ಅವರನ್ನು ಬಂಧಿಸಿರುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಕೇಂದ್ರ ಸರ್ಕಾರ ರೈತರ ಕ್ಷಮೆ ಕೇಳಿ, ಬಂಧಿಸಿದ ರೈತರನ್ನು ಕೂಡಲೇ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ಕರ್ನಾಟಕ ರಾಜ್ಯ ರೈತ ಸಂಘದ ಹಿರಿಯ ಮುಖಂಡ ಅಣ್ಣೂರು ಮಹೇಂದ್ರ ಅವರು ಮಾತನಾಡಿ, ‘ರಾಜ್ಯದ ರೈತರಿಗೆ ತಕ್ಷಣ ಕೇಂದ್ರ ಮತ್ತು ರಾಜ್ಯ ಸರ್ಕಾರ ಬರ ಪರಿಹಾರ ಬಿಡುಗಡೆ ಮಾಡಬೇಕು. ರೈತರು ಮಾಡಿರುವ ಎಲ್ಲಾ ಕೃಷಿ ಸಾಲ, ಬ್ಯಾಂಕ್, ಸಹಕಾರ ಸಂಘ ಸಾಲಗಳನ್ನು ಮನ್ನಾ ಮಾಡಬೇಕು. ಗುಣಮಟ್ಟದ ವಿದ್ಯುತ್‌ ಪೂರೈಸಬೇಕು. ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಮೇವು ಬ್ಯಾಂಕ್ ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು.

ತಹಶೀಲ್ದಾರ್ ಸೋಮಶೇಖರ್ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು. ರೈತ ಸಂಘದ ಮುಖಂಡರಾದ ಪಣ್ಣೆದೊಡ್ಡಿ ವೆಂಕಟೇಶ, ರಮೇಶ, ಕೆ.ಎಸ್. ಪುಟ್ಟಸ್ವಾಮಿ, ಬಿ.ಎಂ. ದೇವರಾಜು, ಬಿ. ರಾಜು, ಉಮೇಶ, ಚನ್ನಪ್ಪ, ಕೃಷ್ಣ, ಹನುಮಂತಯ್ಯ, ಲಿಂಗರಾಜು, ಎಂ.ಸಿ. ರಾಜೇಶ, ಲಿಂಗೇಗೌಡ, ಕೆ.ಎಸ್. ರಾಮಲಿಂಗೇಗೌಡ, ಕೆ.ಟಿ. ಚಂದ್ರಶೇಖರ್, ಮಹದೇವಸ್ವಾಮಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT