ಶ್ರೀರಂಗಪಟ್ಟಣ: ಕಲ್ಲು ಗಣಿಗಾರಿಕೆ ವಿಷಯದಲ್ಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಅವರು ಅನವಶ್ಯಕವಾಗಿ ದಿ.ಅಂಬರೀಷ್ ಅವರ ಹೆಸರು ಎಳೆದು ತಂದಿದ್ದಾರೆ ಎಂದು ಆರೋಪಿಸಿ ಅಖಿಲ ಕರ್ನಾಟಕ ಅಂಬರೀಷ್ ಅಭಿಮಾನಿಗಳ ಸಂಘದ ಸದಸ್ಯರು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೇಲೂರು ಸೋಮಶೇಖರ್ ಮಾತನಾಡಿ ‘ಹಂಗರಹಳ್ಳಿ ಜೀತ ಪ್ರಕರಣ ನಡೆದಾಗ ರವೀಂದ್ರ ಶ್ರೀಕಂಠಯ್ಯ ಅವರ ತಾಯಿ ಪಾರ್ವತಮ್ಮ ಅವರೇ ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕಿಯಾಗಿದ್ದರು. ಶಾಸಕರು ಅದನ್ನು ನೆನಪು ಮಾಡಿಕೊಳ್ಳಬೇಕು. ಇನ್ನುಮುಂದೆ ಅಂಬರೀಷ್ ಅವರ ಬಗ್ಗೆ ಮಾತನಾಡಿದರೆ ಬೀದಿಗಿಳಿದು ಹೋರಾಟ ನಡೆಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.

‘ಅಂಬರೀಷ್ ಅವರು ಬದುಕಿದ್ದಾಗಲೇ ಶಾಸಕರು ಮಾತನಾಡಬೇಕಾಗಿತ್ತು. ಅಕ್ರಮ ಗಣಿಗಾರಿಕೆಯನ್ನು ರಕ್ಷಣೆ ಮಾಡಿಕೊಳ್ಳಲು ಅಂಬರೀಷ್ ಅವರನ್ನು ಎಳೆದು ತಂದರೆ ಸುಮ್ಮನಿರುವುದಿಲ್ಲ. ಜಿಲ್ಲೆಯಲ್ಲಿ, ರಾಜ್ಯದಲ್ಲಿ ಅಂಬರೀಷ್ ಅವರಿಗೆ ಅಪಾರ ಅಭಿಮಾನಿಗಳಿದ್ದಾರೆ. ಅವರ ವಿರುದ್ಧ ಮಾತನಾಡಿದರೆ ಅಭಿಮಾನಿಗಳ ಪ್ರತಿಭಟನೆ ಎದುರಿಸಬೇಕಾಗುತ್ತದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.