ಶನಿವಾರ, ಸೆಪ್ಟೆಂಬರ್ 18, 2021
31 °C

ಮಳವಳ್ಳಿಯಲ್ಲಿ ಬೆಂಕಿ ಅವಘಡ: 20 ಕುರಿ ಸಜೀವ ದಹನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳವಳ್ಳಿ: ಕುರಿಗಳನ್ನು ಕೂಡಿ ಹಾಕಿದ್ದ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು 20 ಕುರಿಗಳು ಸಜೀವ ದಹನವಾಗಿರುವ ಘಟನೆ ತಾಲ್ಲೂಕಿನ ಮಾಗನಹಳ್ಳಿ ಗ್ರಾಮದಲ್ಲಿ ತಡರಾತ್ರಿ ನಡೆದಿದೆ.

ಗ್ರಾಮದ ಸಿದ್ದಪ್ಪ ಎಂಬುವರಿಗೆ ಸೇರಿದ ಕುರಿಗಳನ್ನು ಗುಡಿಸಲಿನ ಕೊಟ್ಟಿಗೆಯಲ್ಲಿ ಕಟ್ಟಿಹಾಕಿದ್ದರು. ಗುರುವಾರ ಮಧ್ಯರಾತ್ರಿ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು 20 ಕುರಿಗಳು ಸಜೀವ ದಹನವಾಗಿವೆ. 

ಲಕ್ಷಾಂತರ ರೂಪಾಯಿ ಸಾಲ ಮಾಡಿ ಕುರಿಗಳನ್ನು ಸಾಕಿದ್ದರು. ಆಕಸ್ಮಿಕ ಬೆಂಕಿ ಬಿದ್ದು ಎಲ್ಲವೂ ಸುಟ್ಟುಹೋಗಿದ್ದು, ಇದ್ದರಿಂದ ಸಾಕಷ್ಟು ನಷ್ಟವಾಗಿದ್ದು, ತಾಲ್ಲೂಕು ಆಡಳಿತ ಸಂಬಂಧ ಅಧಿಕಾರಿಗಳು ಸೂಕ್ತ ಪರಿಹಾರ ನೀಡಬೇಕು ಎಂದು ಮಾಲೀಕ ಸಿದ್ದಪ್ಪ ತಮ್ಮ ಆಳಲು ತೋಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಕಿರುಗಾವಲು ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂಬಂಧ ಕಿರುಗಾವಲು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು